ಬೆಂಗಳೂರು: ಕರ್ನಾಟಕ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಅಲಹಾಬಾದ್ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿದ್ದ ರಿತು ರಾಜ್ ಅವಸ್ಥಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Advertisement
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. 1960ರ ಜುಲೈ 3ರಂದು ಜನಿಸಿದ ರಿತು ರಾಜ್ ಅವಸ್ಥಿ ಕಾನೂನು ಪದವಿಯನ್ನು 1986ರಲ್ಲಿ ಲಕ್ನೋ ವಿಶ್ವವಿದ್ಯಾಲಯದಲ್ಲಿ ಪೂರೈಸಿದ್ದಾರೆ. ಇದನ್ನೂ ಓದಿ: 5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು
Advertisement
Advertisement
1987ರಲ್ಲಿ ಅಡ್ವೊಕೇಟ್ ಆಗಿ ದಾಖಲಾತಿ ಮಾಡಿಕೊಂಡ ನಂತರ ಸಿವಿಲ್, ಸರ್ವಿಸ್ ಮತ್ತು ಶಿಕ್ಷಣ ವಿಷಯಗಳಲ್ಲಿ ಅಲಹಾಬಾದ್ ಹೈಕೋರ್ಟ್‍ನ ಲಕ್ನೋ ಪೀಠದ ಮೂಲಕ ವ್ಯಾಜ್ಯಗಳ ಅಭ್ಯಾಸ ನಡೆಸುತ್ತಿದ್ದರು. ಬಳಿಕ 2009ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಹೊಂದುವ ಮೊದಲು ಲಕ್ನೋದಲ್ಲಿ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್ ಶಾ
Advertisement
ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜ್ಯದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಲವು ಗಣ್ಯರು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.