ರಾಯಚೂರು/ಯಾದಗಿರಿ: ಮಹಾರಾಷ್ಟ್ರ (Maharashtra) ಸೇರಿದಂತೆ ಕೃಷ್ಣಾ ನದಿ (Krishna River) ಮೇಲ್ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ನಾರಾಯಣಪುರ ಡ್ಯಾನಿಂದ (Narayanapura Dam) ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣೆ ಮೈದುಂಬಿ ಹರಿಯುತ್ತಿದ್ದಾಳೆ.
ರಾಯಚೂರು (Raichuru) ಜಿಲ್ಲೆಯಲ್ಲಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ನದಿ ಪಾತ್ರಕ್ಕೆ ಯಾರೂ ತೆರಳದಂತೆ ಎಚ್ಚರಿಸಲಾಗಿದೆ. ಇದನ್ನೂ ಓದಿ: ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮುಂಗಾರು ಮಳೆ- ಅನ್ನದಾತರಲ್ಲಿ ಮಂದಹಾಸ
ಜಲಾಶಯದ 24 ಕ್ರಸ್ಟ್ ಗೇಟ್‌ಗಳಿಂದ 1,11,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕಿನ ನದಿ ದಂಡೆಯ ಗ್ರಾಮಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಗೆ ಕೆಲವೇ ಅಡಿಗಳು ಬಾಕಿಯಿದೆ. ಆಲಮಟ್ಟಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿದೆ. ಅಧಿಕಾರಿಗಳು ನೀರಿನ ಹೊರಹರಿವು ಪ್ರಮಾಣ ಹಂತ ಹಂತವಾಗಿ ಹೆಚ್ಚಳವಾಗುವ ಮುನ್ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ನೆರೆಗೆ ಅಸ್ಸಾಂ ತತ್ತರ – 3 ಲಕ್ಷಕ್ಕೂ ಹೆಚ್ಚು ಜನರ ಜೀವನ ಅಸ್ತವ್ಯಸ್ತ, ಸಾವಿನ ಸಂಖ್ಯೆ 78ಕ್ಕೆ ಏರಿಕೆ
