Connect with us

Crime

ವಿಜಯೋತ್ಸವ ವೇಳೆ ಕೈ, ಕಮಲ ಕಾರ್ಯಕರ್ತರ ಗಲಾಟೆ – ತಂದೆ, ಮಗ ಸಾವು

Published

on

ಜೈಪುರ: ಬಿಜೆಪಿಯ ವಿಜಯೋತ್ಸವದಲ್ಲಿ ನಡೆದ ಕೈ ಕಾರ್ಯಕರ್ತರ ಗಲಾಟೆಯಲ್ಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಜೈಪುರದ ಘತೇಪುರ ಪಟ್ಟಣದ ಬಲೋಡ್ ಬಡಿ ಗ್ರಾಮದಲ್ಲಿ ನಡೆದಿದೆ.

ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಈ ವೇಳೆ ತಂದೆ ಮತ್ತು ಮಗ ಮೃತಪಟ್ಟಿರುವುದು ತಿಳಿದು ಬಂದಿದೆ.

 

ಮೃತರನ್ನು ಕನ್ಹನ್ಯಾಲಾಲ್(35) ಮತ್ತು ಇವರ ತಂದೆ ಪ್ಯಾರೆಲಾಲ್(57) ಎಂದು ಗುರುತಿಸಲಾಗಿದೆ. ಗಲಾಟೆಯಲ್ಲಿ ಗಾಯಗೊಂಡಿದ್ದ ತಂದೆ-ಮಗ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುವ ವೇಳೆ ಮಗ ಕನ್ಹನ್ಯಾಲಾಲ್ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಪ್ಯಾರೆಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ವೇಳೆ ಸಾವನ್ನಪ್ಪಿದ್ದಾರೆ. ಈ ಗಲಾಟೆಯಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

 

ಗಲಾಟೆಗೆ ಕಾರಣವೇನು?
ಪಂಚಾಯತ್ ಸಮಿತಿ ಫತೇಪುರ್ ವಾರ್ಡ್ ನಂ 19ರಲ್ಲಿ ಬಿಜೆಪಿ ಅಭ್ಯರ್ಥಿ ರುಬಿನಾ ಖಾನ್ ಜಯಗಳಿಸಿದ್ದಾರೆ. ಹೀಗಾಗಿ ಮೆರವಣಿಗೆ ನಡೆಸಿ ಸಂಭ್ರಮಿಸಿ ವಿಜಯೋತ್ಸವವನ್ನು ಬಿಜೆಪಿ ಆಚರಿಸುತ್ತಿತ್ತು. ಈ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನನ್ನು ಯಾರೋ ಥಳಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜಿಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದೆ. ಕೈಯಲ್ಲಿ ಕೋಲುಗಳನ್ನು ಹಿಡಿದು ಪರಸ್ಪರ ಘರ್ಷಣೆ ನಡೆಸಿದ್ದಾರೆ. ಕೆಲವರು ಮನೆಗೆ ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಂಯತ್ರಣಕ್ಕೆ ತಂದಿದ್ದಾರೆ. ಇದನ್ನು ಓದಿ:ರಾಜಸ್ಥಾನ ಪಂಚಾಯತ್‌ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ, ಗೆಹ್ಲೋಟ್‌ಗೆ ಮುಖಭಂಗ

ಈ ಪ್ರಕರಣದಲ್ಲಿ ನಾವು ಈ ವರೆಗೆ 22 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಸಂಪೂರ್ಣ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಸಾಕ್ಷ್ಯಗಳನ್ನು ಸಂಗ್ರಹಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಗನ್‍ದೀಪ್ ಸಿಂಕ್ಲಾ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in