– ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಆರ್‌ಜೆಡಿ ಮುಖ್ಯಸ್ಥ
ಪಾಟ್ನಾ: ಆರೋಗ್ಯ ಹದಗೆಟ್ಟ ಕಾರಣ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರನ್ನು ಬಿಹಾರದ ಪರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿಗೆ ತೆರಳುವ ಸಲುವಾಗಿ ಸಂಜೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಬ್ಲಡ್ ಶುಗರ್ ಲೆವೆಲ್ (Blood Sugar Level) ಏರಿಕೆಯಾಗಿ ಆರೋಗ್ಯ ಹದಗೆಟ್ಟಿದೆ. ಏರ್ ಅಂಬುಲೆನ್ಸ್ ಮೂಲಕ ಲಾಲೂ ಪ್ರಸಾದ್ ಅವರನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಈ ಸಂಸತ್ತನ್ನೇ ಕಾಂಗ್ರೆಸ್ ವಕ್ಫ್‌ಗೆ ನೀಡ್ತಿತ್ತು: ಕಿರಣ್ ರಿಜಿಜು
ಬಿಹಾರದ 13 ಕೋಟಿ ಜನರ ಆಶೀರ್ವಾದ ಲಾಲೂ ಪ್ರಸಾದ್ ಯಾದವ್ ಅವರೊಂದಿಗಿದೆ. ಚಿಂತಿಸುವ ಅಗತ್ಯವಿಲ್ಲ ಎಂದು ಆರ್‌ಜೆಡಿ ನಾಯಕ ಭಾಯಿ ವೀರೇಂದ್ರ ತಿಳಿಸಿದ್ದಾರೆ. ಇದನ್ನೂ ಓದಿ: 15 ವರ್ಷದ ವಿದ್ಯಾರ್ಥಿ ಮೇಲೆ ರೇಪ್ ಆರೋಪ – ಶಿಕ್ಷಕಿ ಬಂಧನ
ಕಳೆದ ವರ್ಷ ಲಾಲೂ ಪ್ರಸಾದ್ ಅವರನ್ನು ಮುಂಬೈನ ಏಷ್ಯನ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಆಂಜಿಯೋಪ್ಲ್ಯಾಸ್ಟಿಗೆ ಒಳಪಡಿಸಲಾಯಿತು. ಅವರ ಆರೋಗ್ಯ ಹದಗೆಟ್ಟ ಬಳಿಕ ಜುಲೈ 2024ರಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಲಾಲೂ ಪ್ರಸಾದ್ ದಾಖಲಾಗಿದ್ದರು. ಡಿಸೆಂಬರ್ 2022ರಲ್ಲಿ ಸಿಂಗಾಪುರದಲ್ಲಿ ಲಾಲೂ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಕಿರಿಯ ಮಗಳು ರೋಹಿಣಿ ಆಚಾರ್ಯ ತಮ್ಮ ಮೂತ್ರಪಿಂಡವನ್ನು ತಂದೆಗೆ ದಾನ ಮಾಡಿದ್ದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಎಲ್ಲಾ ಅಧಿಕಾರ ಅನುಭವಿಸಿದ್ದೇನೆ, ಮಂತ್ರಿ ಮಾಡೋದು ಸಿಎಂಗೆ ಬಿಟ್ಟ ವಿಚಾರ: ಆರ್.ವಿ.ದೇಶಪಾಂಡೆ
 
					 
		 
		 
		 
		 
		 
		 
		 
		 
		