ಪಾಟ್ನಾ: ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್, ಆರ್‌ಜೆಡಿ ನಾಯಕನನ್ನು ಬೈಕ್‌ನಲ್ಲಿ ಬಂದ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್‌ನಲ್ಲಿ (Bihar) ನಡೆದಿದೆ.
ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಹತ್ಯೆಯಾದವರು. ಮಂಗಳವಾರ ಸಂಜೆ ಬಿಹಾರದ ಹಾಜಿಪುರದಲ್ಲಿರುವ ತಮ್ಮ ನಿವಾಸದ ಬಳಿಯ ಬಟ್ಟೆ ಅಂಗಡಿಯಲ್ಲಿ ಕುಳಿತಿದ್ದರು. ದ್ವಿಚಕ್ರವಾಹನದಲ್ಲಿ ಬಂದ ಮೂವರು ರೈ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಹಣ್ಣುಗಳ ಉತ್ಪಾದನೆ ಹೆಚ್ಚಿಸಲು ಕೇಂದ್ರದ ಮಾಸ್ಟರ್ ಪ್ಲ್ಯಾನ್ – ಏನಿದು ಕ್ಲೀನ್ ಪ್ಲಾಂಟ್ ಪ್ರೋಗ್ರಾಂ?
Advertisement
ಹಾಜಿಪುರದ ವಾರ್ಡ್ ನಂ.5 ರಲ್ಲಿ ಮೊದಲ ಬಾರಿಗೆ ಚುನಾಯಿತರಾದ ಕೌನ್ಸಿಲರ್ ಮತ್ತು ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (RJD) ಸದಸ್ಯ ರೈ ಆತ್ಮರಕ್ಷಣೆಗೆ ಮನೆ ಕಡೆ ಓಡಿದರು. ಆದಾಗ್ಯೂ, ದಾಳಿಕೋರರು ಹಿಂಬಾಲಿಸಿ ಗುಂಡಿನ ದಾಳಿ ನಡೆಸಿದ್ದಾರೆ.
Advertisement
Advertisement
ಗುಂಡಿನ ಸದ್ದು ಕೇಳಿದ ಕೂಡಲೇ ಆತನ ಮನೆಯವರು ಮತ್ತು ಸ್ಥಳೀಯರು ಧಾವಿಸಿ ಆತನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ರೈ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
Advertisement
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರ್‌ಜೆಡಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ದೆಹಲಿಯ 3 ಮಾಲ್, ಒಂದು ಆಸ್ಪತ್ರೆಗೆ ಬಾಂಬ್ ಬೆದರಿಕೆ
ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಗೂಂಡಾಗಳು ಹಾಜಿಪುರದಲ್ಲಿ ವಾರ್ಡ್ ಕೌನ್ಸಿಲರ್ ಪಂಕಜ್ ರೈ ಅವರನ್ನು ರಾತ್ರಿ ಗುಂಡಿಕ್ಕಿ ಕೊಂದಿದ್ದಾರೆ. ಮುಖ್ಯಮಂತ್ರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳು ಅವರ ಗೂಂಡಾಗಳು ಅವ್ಯವಸ್ಥೆಯನ್ನು ಸೃಷ್ಟಿಸುತ್ತಿರುವಾಗ ಶಾಂತಿಯುತವಾಗಿ ನಿದ್ರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.