ನವದೆಹಲಿ: ಆರ್‌ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ (Lalu Prasad Yadav) ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
गरीबों के मसीहा राष्ट्रीय अध्यक्ष आदरणीय श्री लालू प्रसाद यादव जी को अस्वस्थ होने के चलते दिल्ली एम्स में भर्ती कराया गया है।
सभी बिहारवासियों की ईश्वर से प्रार्थना है कि लालू जी शीघ्र स्वस्थ्य हों।
#LaluPrasadYadav #RJD pic.twitter.com/xUdmHX13iE
— Prince Yadav (@PrinceeRJD) July 23, 2024
ಸದ್ಯ ಮಾಜಿ ಸಿಎಂ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕುಟುಂಬದ ಸದಸ್ಯರು ಆಸ್ಪತ್ರೆಗೆ ಹಾಜರಾಗಿದ್ದು, ಅವರ ಆರೈಕೆಯಲ್ಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು
ಪ್ರಿನ್ಸ್ ಯಾದವ್ ಎಂಬವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಲಾಲು ಪ್ರಸಾದ್ ಯಾದವ್ ಅವರು ಅನಾರೋಗ್ಯದ ಕಾರಣ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರನ್ನು ಪ್ರಾರ್ಥಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮಾಜಿ ಸಿಎಂ ಆಸ್ಪತ್ರೆಯ ಬೆಡ್‌ನಲ್ಲಿರುವ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.