ಬೆಳಗಾವಿ: ಅಂಕೋಲಾ ಉದ್ಯಮಿ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಬೆಳಗಾವಿ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಶಿಕ್ಷೆಯ ಪ್ರಮಾಣ ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.
Advertisement
Advertisement
ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ನಾಯಕ ಈ ಪ್ರಕರಣದಿಂದ ದೋಷಮುಕ್ತರಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ
Advertisement
ಉಳಿದಂತೆ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ
Advertisement
2013 ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು.