ಕೋಲ್ಕತ್ತಾ: ಹೆದ್ದಾರಿಯಲ್ಲಿ ಇಂದು ಮುಂಜಾನೆ ಟ್ರಕ್, ಟೆಂಪೋ ಮಧ್ಯ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಸ್ಖಾಲಿಯಲ್ಲಿ ನಡೆದಿದೆ.
West Bengal CM Mamata Banerjee offers condolences on the loss of lives in the Nadia road accident
“Government of West Bengal will extend every necessary assistance and support to the kin of the victims,” says CM.
(file photo) pic.twitter.com/OnUZOMnTH3
— ANI (@ANI) November 28, 2021
Advertisement
ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 30 ಜನರಿದ್ದ ಟೆಂಪೋ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. 11 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಏಳು ಮಂದಿಯನ್ನು ಶಕ್ತಿನಗರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರೆಲ್ಲರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತಿಬ್ಬರನ್ನು ಎನ್‍ಆರ್‍ಎಸ್ ಮೆಡಿಕಲ್ ಆಸ್ಪತ್ರೆಗೆ ರವಾನಿಸಲಾಗಿದೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
Advertisement
Deeply pained at the reported death of 18 people and 5 others injured in Nadia District after the vehicle they were travelling in collided with a truck parked on the side of the road: West Bengal Governor Jagdeep Dhankhar
(file photo) pic.twitter.com/GFUxCFOMu8
— ANI (@ANI) November 28, 2021
Advertisement
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಫುಲ್ಬರಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುರಂತಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.