ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!

Public TV
1 Min Read
Accident 3

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Accident 2

ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲೇ ಹಿಂದೂ ದೇವಾಲಯವಿತ್ತು – ಪುರಾತತ್ವ ಇಲಾಖೆ ವರದಿ ಬಹಿರಂಗ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.

ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ.. 

Share This Article