– ಮೂವರಿಗೆ ಗಂಭೀರ ಗಾಯ
ರಾಮನಗರ: ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Express Way) ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಅಪಘಾತ (Road Accident) ಸಂಭವಿಸಿದ್ದು, ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡು, ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು ಮಾರ್ಗದಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಅಳವಡಿಸಿದ್ದ ಡಿವೈಡರ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!
ಇನ್ನೂ ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಬೆಂ-ಮೈಸೂರು ಎಕ್ಸ್‌ಪ್ರೇಸ್‌ವೇನಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್‌ಜಾಮ್ ಆಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು (Channapattana Rural Police) ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು.
ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ (Channapattana Traffic Police) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂಬೈ, ದೆಹಲಿಯಷ್ಟೇ ಅಲ್ಲ ಬೆಂಗ್ಳೂರಲ್ಲೂ ಹೆಚ್ಚಾಗ್ತಿದೆ ಲಿವಿಂಗ್ ರಿಲೇಷನ್ ಕೊಲೆ ಕೇಸ್