DistrictsKarnatakaKolarLatestMain Post

ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸಾವು – ಕಾರು ಬಿಟ್ಟು ಪರಾರಿಯಾದ ಶಾಸಕ

Advertisements

ಕೋಲಾರ: ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ್ದು, ಕಾರನ್ನು ಬಿಟ್ಟು ಆಂಧ್ರಪ್ರದೇಶದ ಶಾಸಕ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ ವೃತ್ತದಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಗೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಡಕಸಿರ ಶಾಸಕ ತಿಪ್ಪೆಸ್ವಾಮಿಗೆ ಸೇರಿದ ಕಾರು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ನಿರ್ಮಾಣ ಹಂತದ ಆಸ್ಪತ್ರೆ ಮೇಲ್ಛಾವಣಿ ಕುಸಿತ- ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಚಿಂತಾಜನಕ

ರಸ್ತೆ ಅಪಘಾತದಲ್ಲಿ ಮಡಕಸಿರ ಶಾಸಕ ಹಾಗೂ ಕಾರು ಚಾಲಕನಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಅಪಘಾತದಲ್ಲಿ ಮುಳಬಾಗಲು ಮೂಲದ ಟ್ರ್ಯಾಕ್ಟರ್ ಚಾಲಕ ಸುಬ್ರಮಣಿ(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ದಲಿತ್ Vs ಎಸ್‌ಡಿಪಿಐ ಜಟಾಪಟಿ

ಮುಳಬಾಗಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶಾಸಕನ ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ತಿಪ್ಪೆಸ್ವಾಮಿ ಆಂಧ್ರಪ್ರದೇಶದ ಪ್ರಸ್ತುತ ಜಗನ್ ಸರ್ಕಾರದ ವೈಎಸ್‌ಆರ್ ಕಾಂಗ್ರೇಸ್‌ನ ಹಾಲಿ ಶಾಸಕನಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿರಬಹುದು ಎನ್ನಲಾಗಿದೆ.

Leave a Reply

Your email address will not be published.

Back to top button