ರಾಯಚೂರು: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ (Mantralaya Vidyapeeth) ವಾಹನ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ರಾಯಚೂರಿನ (Raichur) ಸಿಂಧನೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು (Students), ಓರ್ವ ಚಾಲಕ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು.
14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಇದನ್ನೂ ಓದಿ: ಬ್ರಹ್ಮಪುತ್ರದ ನದಿಗೆ ಬೃಹತ್ ಡ್ಯಾಮ್ ಕಟ್ಟಲು ಮುಂದಾದ ಚೀನಾ – ಭಾರತದ ಆತಂಕವೇನು?
ಸದ್ಯ ಗಾಯಗೊಂಡ 10 ವಿದ್ಯಾರ್ಥಿಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದ ಯಲ್ಲಾಪುರದಲ್ಲಿ ಭೀಕರ ಅಪಘಾತ – 9 ಮಂದಿ ದಾರುಣ ಸಾವು
ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಶ್ರೀಗಳು ಆಗಮಿಸಿ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಮಗನ ಎದುರೇ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ