ರಾಯಚೂರು: ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಭೀಕರ ರಸ್ತೆ ಅಪಘಾತಕ್ಕೆ (Road Accident) ಬಲಿಯಾಗಿರುವ ಘಟನೆ ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ನಡೆದಿದೆ.
ಕುರಿಗಳ ಖರೀದಿಗೆ ಹೊರಟಿದ್ದವರ ಬೊಲೆರೋ ಪಿಕಪ್ ವಾಹನವು (Bolero Vehicle) ರಾಷ್ಟ್ರೀಯ ಹೆದ್ದಾರಿ ಬಳಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ನಾಗರಾಜ್, ಸೋಮ, ನಾಗಭೂಷಣ, ಮುರಳಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ – ಉಲೇಮಾ ಸಮಿತಿ ಕರೆ
ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ಮೂಲದವರು. ಹಿಂದೂಪುರದಿಂದ ಶಹಾಪೂರ ಸಂತೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಗಬ್ಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿ: Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್
ಈ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Good Friday 2025: ಗುಡ್ ಫ್ರೈಡೇ ಕ್ರೈಸ್ತರ ಪವಿತ್ರ ದಿನ ಏಕೆ? ಇದರ ಇತಿಹಾಸ ನೀವೂ ತಿಳಿಯಿರಿ…