ಮಡಿಕೇರಿ: ಜಿಟಿಜಿಟಿ ಮಳೆಯೊಂದಿಗೆ ಮಂಜು ಕವಿದ ವಾತಾವರಣದ ಹಿನ್ನೆಲೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಂಟಿಕೊಪ್ಪ ಪನ್ಯದ ಆನಂದ ಬಸಪ್ಪ ತೋಟದ ವ್ಯವಸ್ಥಾಪಕ ಜಾವಮನೆ ಮುಸ್ತಾಫ (47) ಎಂಬವರೇ ಮೃತಪಟ್ಟವರು. ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ಇನ್ನೋವಾ ಕಾರು ಹಾಗೂ ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಎಕ್ಸ್-ಯುವಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ
ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿವೆ. ಇನ್ನೋವಾ ಕಾರಿನಲ್ಲಿದ್ದ ಜಾವಮನೆ ಮುಸ್ತಫಾ ಅವರ ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆಯಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದನ್ನೂ ಓದಿ: ಟ್ರ್ಯಾಕ್ಟರ್ ಸ್ಪೀಕರ್ ಸೌಂಡ್ ಕಡಿಮೆ ಮಾಡಿ ಎಂದಿದ್ದಕ್ಕೆ ಸ್ವಾಮೀಜಿ ಮೇಲೆಯೇ ಹಲ್ಲೆ
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.