ರಾಯಚೂರು: ತನ್ನ ಮೊದಲ ಮತದಾನ (Voting) ಮಾಡಲು ಉತ್ಸಾಹದಲ್ಲಿ ಸ್ವಗ್ರಾಮಕ್ಕೆ ಬಂದಿದ್ದ ವಿದ್ಯಾರ್ಥಿನಿ ಮತದಾನ ನಂತರ ಅಪಘಾತಕ್ಕೆ ಒಳಗಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಲಿಂಗಸುಗೂರಿನ ಮುದಗಲ್ ಬಳಿ ಮೇ 10 ರಂದು ಅಪಘಾತ ನಡೆದಿದೆ.
ಮತದಾನ ಮಾಡಿ ಬೈಕ್‌ನಲ್ಲಿ ಮನೆಗೆ ಮರಳುವಾಗ ಬೈಕ್ ಹಾಗೂ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ (Road Accident) ನಡೆದಿದ್ದು, 20 ವರ್ಷದ ಸನಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮೊದಲ ಬಾರಿಗೆ ಮತದಾನ ಮಾಡಲು ಧಾರವಾಡದಿಂದ ಹಟ್ಟಿ ಪಟ್ಟಣಕ್ಕೆ ಬಂದಿದ್ದಳು. ಮಸ್ಕಿ ವಿಧಾನಸಭಾ ಕ್ಷೇತ್ರದ ಜಕ್ಕಲುಮರಡಿಯಲ್ಲಿ ಮತದಾನ ಮಾಡಿ ವಾಸವಿರುವ ಹಟ್ಟಿಗೆ ಬೈಕ್‌ನಲ್ಲಿ ಮರಳುವಾಗ ಮುದಗಲ್ ಬಳಿ ಅಪಘಾತ ನಡೆದಿದೆ. ಇದನ್ನೂ ಓದಿ: ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್
ಧಾರವಾಡದಲ್ಲಿ ಬಿಎಸ್‌ಸಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ (BSC Nursing Student) ಅಪಘಾತದಲ್ಲಿ ಕೈ, ಕಾಲು ಮುರಿತವಾಗಿದ್ದು, ಕಿಡ್ನಿ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳ ಚಿಕಿತ್ಸೆಗೆ ಪರದಾಡುತ್ತಿರುವ ಬಡ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಮನೆಗೆ ಆಧಾರವಾಗಬೇಕಿದ್ದ ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೆ ಪೋಷಕರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಸಚಿನ್ ಪೈಲೆಟ್‌ಗೆ ರಾಹುಲ್ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ