ಆಟೋ- ಟಾಟಾ ಏಸ್ ನಡುವೆ ಡಿಕ್ಕಿ ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವು

Public TV
0 Min Read
HVR ACCIDENT AV

ಹಾವೇರಿ: ಆಟೋಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರಿಗೆ ಗಾಯವಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅಸುಂಡಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಮಂಜುಳಾ ಪರಾಪುರ (48) ಮತ್ತು ಮನು ಕೆಂಚನಗೌಡರ (7) ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

HVR ACCIDENT AV 7

HVR ACCIDENT AV 3

HVR ACCIDENT AV 5 1

HVR ACCIDENT AV 2 1

HVR ACCIDENT AV 6

HVR ACCIDENT AV 8

HVR ACCIDENT AV 11

Share This Article