-ಗುಳೆ ಹೋಗಿದ್ದವರು ಮರಳುವಾಗ ಅಪಘಾತ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30 ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ದೇವದುರ್ಗ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಜಮೀನಿಗೆ ಪಲ್ಟಿ ಹೊಡೆದಿದೆ. ಮಹಾರಾಷ್ಟ್ರದ ಪುಣೆಯಿಂದ ಅರಕೇರಾ ಗ್ರಾಮಕ್ಕೆ ಬರುತ್ತಿದ್ದ ವೇಳೆ ಬಸ್ ಅಪಘಾತಕ್ಕೀಡಾಗಿದೆ. ಘಟನೆ ಬಳಿಕ ಬಸ್ ಚಾಲಕ ಹಾಗೂ ಬೈಕ್ ಸವಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು
ಸಂಬಂಧಿಕರೊಬ್ಬರು ಸಾವನ್ನಪ್ಪಿದ ಹಿನ್ನೆಲೆ ಪುಣೆಗೆ ಕೂಲಿ ಕೆಲಸಕ್ಕೆ ಗುಳೆ ಹೋಗಿದ್ದವರು ಗ್ರಾಮಕ್ಕೆ ಮರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸದ್ಯ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೋವಿಡ್‍ನಿಂದ ಮೃತಪಟ್ಟ ಕುಟುಂಬಗಳಿಗೆ ಆಸರೆ ನೀಡುವುದು ನಮ್ಮ ಕರ್ತವ್ಯ : ವಿ.ಸೋಮಣ್ಣ