CrimeLatestLeading NewsMain PostNational

ಸಣ್ಣ ರಸ್ತೆ ಅಪಘಾತದಿಂದ ಕೋಮು ಗಲಭೆ – ದೇವಾಲಯ ಧ್ವಂಸ, 22 ಮಂದಿ ಅರೆಸ್ಟ್

ಗಾಂಧಿನಗರ: ಎರಡು ಸಮುದಾಯಗಳಿಗೆ ಸೇರಿದ ದ್ವಿಚಕ್ರ ವಾಹನಗಳ ಸಣ್ಣದೊಂದು ಅಪಘಾತದಿಂದಾಗಿ ಸಂಘರ್ಷ ನಡೆದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಪೊಲೀಸರು ಸಂಘರ್ಷಕ್ಕೆ ಸಂಬಂಧಪಟ್ಟ 22 ಜನರನ್ನು ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ಧರ್ಮದವರಿದ್ದ ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ ಹೊಡೆದಿವೆ. ಈ ಘಟನೆ ವೇಳೆ ನಡೆದ ವಾಕ್ಸಮರದಿಂದ ಹಿಂಸಾಚಾರ ನಡೆದಿದೆ. ಗಲಭೆಕೋರರು ಕಲ್ಲು ತೂರಾಟ, ದೇವಾಲಯಗಳ ಧ್ವಂಸ ಹಾಗೂ ವಾಹನಗಳಿಗೆ ಹಾನಿ ಮಾಡಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇದನ್ನೂ ಓದಿ: ಫ್ರೀ ಕೊಡುಗೆಗಳಿಗೆ ಕಡಿವಾಣ ಹಾಕಿ: ರಾಜ್ಯಗಳಿಗೆ ತಜ್ಞರ ಎಚ್ಚರಿಕೆ

ಭಾನುವಾರ ತಡರಾತ್ರಿ ನಡೆದ ರಸ್ತೆ ಅಪಘಾತ ಸಂಘರ್ಷಕ್ಕೆ ಕಾರಣವಾಗಿದ್ದು, 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಸ್ತೆ ಅಪಘಾತದಿಂದಾಗಿ ಎರಡು ಸಮುದಾಯದ ಜನರು ಸ್ಥಳದಲ್ಲಿ ಜಮಾಯಿಸಿದ್ದರಿಂದ ಸಮಸ್ಯೆ ಉಲ್ಪಣಗೊಂಡಿದೆ. ಬಳಿಕ ಕಲ್ಲುತೂರಾಟ, ಹಿಂಸಾಚಾರ ನಡೆದಿದೆ. ಗಲಭೆಕೋರರು ರಸ್ತೆ ಬದಿಯಲ್ಲಿದ್ದ ದೇವಾಲಯಕ್ಕೆ ನುಗ್ಗಿ, ಅಲ್ಲಿನ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ 2 ಆಟೋರಿಕ್ಷಾಗಳು ಹಾಗೂ ಹಲವು ಬೈಕ್‌ಗಳಿಗೆ ಹಾನಿ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಮತ್ತೆ 15 ಜನರ ಬಂಧನ

POLICE JEEP

ಅಪಘಾತ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾವ್ಪುರ ಮತ್ತು ಕರೇಲಿಬಾಗ್ ಪೊಲೀಸ್ ಠಾಣೆಗಳಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಇದುವರೆಗೆ ಒಟ್ಟು 22 ಜನರನ್ನು ಬಂಧಿಸಲಾಗಿದೆ. ಘಟನಾ ಸ್ಥಳದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published.

Back to top button