Bengaluru CityCinemaCrimeKarnatakaLatestLeading NewsMain PostSandalwood

ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ದಾರುಣ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಸಮನ್ವಿ ದಾರುಣವಾಗಿ ಮೃತಪಟ್ಟ ಘಟನೆ ಕೋಣನ ಕುಂಟೆ ಬಳಿ ನಡೆದಿದೆ.

ಆರು ವರ್ಷದ ಸಮನ್ವಿ, ತಾಯಿ ಅಮೃತ ನಾಯ್ಡು ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಕೋಣನ ಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತವಾಗಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: 1 ಕಿ.ಮೀ ಓಡಿ ಕಳ್ಳನನ್ನು ಹಿಡಿದ ಮಂಗಳೂರು ಪೊಲೀಸ್ ವೀಡಿಯೋ ವೈರಲ್

ಅಪಘಾತದಲ್ಲಿ ಗಾಯಾಳಯವಾಗಿರುವ ಅಮೃತಾ ನಾಯ್ಡು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಸಮನ್ವಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್‌ಗೆ ರವಾನೆ ಮಾಡಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಸರೆಚಿದವನ ಕೈಯಲ್ಲೇ ಪ್ಯಾಂಟ್ ಕ್ಲೀನ್ ಮಾಡಿಸಿ ಕಪಾಳಮೋಕ್ಷ ಮಾಡಿದ ಮಹಿಳಾ ಪೊಲೀಸ್

Leave a Reply

Your email address will not be published. Required fields are marked *

Back to top button