ಶಿವಮೊಗ್ಗ: ಕಳೆದ ರಾತ್ರಿಯಿಂದ ಶಿವಮೊಗ್ಗ ಜಿಲ್ಲಾದ್ಯಂತ ಭರ್ಜರಿ ಮಳೆ ಸುರಿಯುತ್ತಿದ್ದು, ಭಾರಿ ಮಳೆಗೆ ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ರಸ್ತೆ ಕುಸಿತ ಸಂಭವಿಸಿದೆ.
ಶಿವಮೊಗ್ಗದಿಂದ ಆಗುಂಬೆ ಮಾರ್ಗವಾಗಿ ಉಡುಪಿ ಸಂಪರ್ಕ ಕಲ್ಪಿಸಿರುವ ಮಾರ್ಗದ ಸಂಪರ್ಕ ರಸ್ತೆ ಕುಸಿತದಿಂದ ಕೆಲ ಸಮಯ ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸದ್ಯ ಭಾರೀ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ.
Advertisement
Advertisement
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಲ್ಲದೇ ತೀರ್ಥಹಳ್ಳಿ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದ್ದ ಕಾರಣ ತಾಲೂಕಿನಾದ್ಯಂತ ಜನ ಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ತುಂಗಾ, ಕುಶಾವತಿ, ವರದಾ ನದಿಗಳು ತುಂಬಿ ಹರಿಯುತ್ತಿವೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿ ಆಪಾಯಮಟ್ಟದಲ್ಲಿ ಹರಿಯುತ್ತಿದ್ದು, ಹಲವು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.