ಲಕ್ನೋ: 1.16ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ರಸ್ತೆ ಉದ್ಘಾಟನೆ ಸಂದರ್ಭದಲ್ಲಿ ಒಡೆದ ತೆಂಗಿನ ಕಾಯಿಯಿಂದ ರಸ್ತೆ ಬಿರುಕು ಬಿಟ್ಟ ಅಚ್ಚರಿಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
1.16ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ 7ಕಿ.ಮೀ ಉದ್ದ ಹೊಸ ರಸ್ತೆಯ ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ, ಕಾಯಿ ಬದಲು ರಸ್ತೆಯೇ ಬಿರುಕು ಬಿಟ್ಟಿದೆ. ಈ ಘಟನೆಯಿಂದ ಮುಜುಗರಕ್ಕೀಡಾಗಿ ಕೆಂಡವಾಗಿರುವ ಆಡಳಿತಾರೂಢ ಬಿಜೆಪಿ ಶಾಸಕಿ ಸುಚಿ ಮೌಸಂ ಚೌದರಿ, ರಸ್ತೆಯ ಕಳಪೆ ಕಾಮಗಾರಿಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಜನವರಿ 1 ರಿಂದ ಎಟಿಎಂ ಶುಲ್ಕ ಹೆಚ್ಚಳ
Advertisement
Advertisement
ಕಳಪೆ ಮಟ್ಟದ ಕಾಮಗಾರಿ ತನಿಖೆಗಾಗಿ ರಸ್ತೆ ಮಾದರಿ ಸಂಗ್ರಹಿಸಲು ಅಧಿಕಾರಿಗಳು ಬರುವವರೆಗೆ 3 ಗಂಟೆಗಳ ಕಾಲ ಸ್ಥಳದಲ್ಲೇ ಕಾದರು. ತಮ್ಮ ಕ್ಷೇತ್ರದಲ್ಲಿ 1.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾಗಿರುವ 7.5 ಕಿಮೀ ರಸ್ತೆ ಕಾಮಗಾರಿ ಕೈಗೊಂಡಿದೆ. ಇದರ ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ ಕಾಯಿ ತುಂಡಾಗದೇ ರಸ್ತೆಯೇ ಹೋಳಾಗಿದೆ. ಈ ವೇಳೆ ಪರಿಶೀಲನೆ ನಡೆಸಿದಾಗ ಕಾಮಗಾರಿಯಲ್ಲಿ ದಕ್ಷತೆ ಇಲ್ಲದಿರುವುದು ಕಂಡುಬಂದಿದೆ ಎಂದು ಬಿಜನೋರ್ ಶಾಸಕಿ ತಿಳಿಸಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ