ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಸರಕೋಡ ಬಳಿ ರಸ್ತೆಗಳೆಲ್ಲಾ ಛಿದ್ರ ಛಿದ್ರವಾಗಿದೆ.
ಹೊಳೆಆಲೂರ ನಿಂದ ಹೊಳೆಹಡಗಲಿ, ಬಸರಕೋಡ ಬಾದಾಮಿ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಪ್ರವಾಹದ ರುದ್ರನರ್ತನಕ್ಕೆ ಛಿದ್ರಗೊಂಡಿದೆ. ಸುಮಾರು ನೂರಾರು ಮೀಟರ್ ನಷ್ಟು ರಸ್ತೆ ಕಿತ್ತುಹೋಗಿದೆ. ನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ರೈತರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಇತ್ತ ರಸ್ತೆಯಿಲ್ಲದೆ ಅತ್ತ ವಾಹನ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.
Advertisement
Advertisement
ಈ ರಸ್ತೆಯಲ್ಲಿ ರಾತ್ರಿ ಸಂಚರಿಸುವ ಪ್ರಯಾಣಿಕರು ಬಹಳ ಜಾಗೃತೆಯಿಂದ ಸಂಚರಿಸಬೇಕಿದೆ. ಸ್ವಲ್ಪ ಯಾಮಾರಿದರೂ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ರಸ್ತೆಯಲ್ಲಿ ಟಂಟಂ ವಾಹನ ಬರಲು ಹರಸಾಹಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಆದಷ್ಟು ಬೇಗ ರಸ್ತೆ ಸರಿಪಡಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.