ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ (National Highway) ಅವ್ಯವಸ್ಥೆಯಿಂದ ಬೇಸತ್ತ ಗ್ರಾಮಸ್ಥರೊಬ್ಬರು ರಾಷ್ಟ್ರೀಯ ಹೆದ್ದಾರಿಯಲ್ಲೇ ಮೀನು (Fish) ಹಿಡಿದು, ಬಟ್ಟೆ (Clothes) ಒಗೆದು ವ್ಯಂಗ್ಯವಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಕರ್ನಾಟಕ (Karnataka), ತಮಿಳುನಾಡು (Tamil Nadu) ನಡುವಿನ ರಾಷ್ಟ್ರೀಯ ಹೆದ್ದಾರಿ ಚಾಮರಾಜನಗರ ತಾಲೂಕು ಕೋಳಿಪಾಳ್ಯದ ಬಳಿ ರಸ್ತೆಯಲ್ಲಿ ನೀರು ನಿಂತು ಅವ್ಯವಸ್ಥೆಯ ಆಗರವಾಗಿದೆ. ಮಳೆ ಬಂದರೆ ರಸ್ತೆ ತುಂಬಾ ನೀರು ನಿಂತು ರಸ್ತೆ ಯಾವುದು ಎಂದು ತಿಳಿಯದೆ ಹೆದ್ದಾರಿ ಬದಿಗೆ ವಾಹನಗಳು ಚಲಿಸಿ ಆಗಾಗ್ಗೆ ಅಪಘಾತ ಇಲ್ಲಿ ಸಾಮಾನ್ಯವಾಗಿದೆ. ಅಪಘಾತಗಳು ನಡೆದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದು ಇದರಿಂದ ಬೇಸತ್ತ ಕೋಳಿಪಾಳ್ಯ ನಿವಾಸಿ ದೇವರಾಜು ಹೆದ್ದಾರಿಯಲ್ಲಿ ನಿಂತ ನೀರಿನಲ್ಲಿ ಮೀನು ಹಿಡಿದು, ಬಟ್ಟೆ ಒಗೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದ ಪೊಲೀಸ್‍ಗೆ ಬಿಯರ್ ಬಾಟಲ್‍ನಲ್ಲಿ ಹೊಡೆದ ಯುವಕ
ಈ ಹೆದ್ದಾರಿಯಲ್ಲಿ ಎರಡು ರಾಜ್ಯಗಳ ನಡುವೆ ನಿತ್ಯ ನೂರಾರು ವಾಹನಗಳ ಸಂಚಾರವಿದ್ದು ಅವೈಜ್ಞಾನಿಕ ಕಾಮಗಾರಿಯಿಂದ ಹೆದ್ದಾರಿಯಲ್ಲಿ ಮಳೆ ನೀರು ತುಂಬಿಕೊಳ್ಳುತ್ತಿದ್ದು ಇದೀಗ ಇಲ್ಲಿ ಮೀನು ಹಿಡಿದು, ಬಟ್ಟೆ ಒಗೆದು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಆಟೋಗೆ ಡಿಕ್ಕಿ ಹೊಡೆದ ಕಾರು – 9 ಗಾಯಾಳುಗಳಿಗೆ ಅಂಬುಲೆನ್ಸ್ ಸಿಗದೇ ಪರದಾಟ