ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ರೋಡ್ ರೇಜ್ ಪ್ರಕರಣಗಳು ಹೆಚ್ಚಾಗಿದ್ದು, ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ನಿನ್ನೆ (ಸೆ.16) ಸಂಜೆ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್ ಸೆಲ್‌ಗೆ ಬರಲಿದೆ 32 ಇಂಚಿನ ಟಿವಿ
KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಸ್ ಕಿಟಕಿಯನ್ನು ಒಡೆಯುವ ಮೂಲಕ ಬಸ್‌ನಲ್ಲಿದ್ದ ಮಕ್ಕಳಿಗೆ ತೀವ್ರ ತೊಂದರೆ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಾಲಾ ಬಸ್‌ಗಳ ಮೇಲೆಯೂ ರೋಡ್ ರೇಜ್ ಮಾಡುತ್ತಾರಾ? ಶಾಲಾ ಮಕ್ಕಳಿಗೂ ಬೆಂಗಳೂರು ಸುರಕ್ಷಿತವಾಗಿಲ್ವಾ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಘಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಐಎಂಎಫ್‌ನಿಂದ ಸಿಗುತ್ತಾ ಬೂಸ್ಟರ್ ಡೋಸ್!