ಚಾಮರಾಜನಗರ: ತಂದೆಯೊಂದಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಹರಿದು ಮಗಳೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ನಡೆದಿದೆ.
ಪ್ರಿಯಾ (19) ಮೃತಳು. ಈಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ ಗ್ರಾಮದ ನಿವಾಸಿ. ಘಟನೆಯಿಂದ ತಂದೆ ರಾಜು ಹಾಗೂ ಸಹೋದರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ
Advertisement
Advertisement
ರಾಜು ಕಣ್ಣೇಗಾಲದಿಂದ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಲಾರಿ ಡಿಕ್ಕಿ ಹೊಡೆದು ಮೂವರು ರಸ್ತೆ ಮೇಲೆ ಬಿದ್ದಿದ್ದರು. ಕೆಳಕ್ಕೆ ಬಿದ್ದ ವೇಳೆ ಟೈಯರ್ ಹರಿದು ಮಗಳು ಸಾವನ್ನಪ್ಪಿದ್ದಾಳೆ. ಗುಂಡ್ಲುಪೇಟೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.