ರಾಯಚೂರು: ರಸ್ತೆ ಕಾಮಗಾರಿ ಭೂಮಿ ಪೂಜೆ ಹಿನ್ನೆಲೆ ಜಿಲ್ಲೆಯ ಲಿಂಗಸುಗೂರಿನ ಹಾಲಿ ಶಾಸಕ ಡಿ.ಎಸ್ ಹೂಲಗೇರಿ ಹಾಗೂ ಮಾಜಿ ಶಾಸಕ ಮಾನಪ್ಪ ವಜ್ಜಲ್ ಬೆಂಬಲಿಗರ ನಡುವೆ ಜಟಾಪಟಿ ಏರ್ಪಟ್ಟು ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Advertisement
ಲಿಂಗಸುಗೂರು ತಾಲೂಕಿನ ಹಟ್ಟಿ- ಚಿಂಚರಕಿ ರಸ್ತೆ ಭೂಮಿ ಪೂಜೆ ವೇಳೆ ಗಲಾಟೆ ನಡೆದಿದ್ದು, ಶಾಸಕರು ಹಾಗೂ ಅಧಿಕಾರಿಗಳು ಮಾಹಿತಿ ನೀಡದೇ ಭೂಮಿ ಪೂಜೆ ಮಾಡುತ್ತಿದ್ದಾರೆ ಅಂತ ಮಾನಪ್ಪ ವಜ್ಜಲ್ ಬೆಂಬಲಿಗರು ಕಿಡಿಕಾರಿದ್ದಾರೆ. ವಜ್ಜಲ್ ಅವಧಿಯಲ್ಲಿ ರಸ್ತೆ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಆದರೆ ಅವರನ್ನೇ ಕರೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಜಿಟಿಡಿ ಪುತ್ರನ ಭಾವಚಿತ್ರ
Advertisement
Advertisement
ಭೂಮಿ ಪೂಜೆಗೆ ಬಂದಿದ್ದ ಡಿ.ಎಸ್. ಹೂಲಗೇರಿಗೆ ಮಾನಪ್ಪ ವಜ್ಜಲ್ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಜಟಾಪಟಿಯ ಮಧ್ಯೆಯೇ ಡಿ.ಎಸ್ ಹೂಲಗೇರಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಭೂಮಿ ಪೂಜೆ ನಂತರ ಡಿ.ಎಸ್ ಹೂಲಗೇರಿಯನ್ನು ಕಾರ್ಯಕರ್ತರು ಮೇಲಕ್ಕೆ ಎತ್ತಿ ಕುಣಿದಿದ್ದಾರೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಇದನ್ನೂ ಓದಿ:ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿದ ಗ್ರಾಮಸ್ಥರು
Advertisement