ಬೀದರ್: ರಾಜ್ಯದಲ್ಲಿ ಒಂದೆಡೆ ಬರ ಆವರಿಸಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ತಂದೊಡ್ಡಿದೆ. ಆದ್ರೆ ಬೀದರ್ (Bidar) ಜಿಲ್ಲೆಯಲ್ಲಿ ಮಳೆಯ (Rain) ಅಬ್ಬರಕ್ಕೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.
Advertisement
ಗಡಿ ಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ಜಿಲ್ಲಾಧಿಕಾರಿ ಕಚೇರಿ ರಸ್ತೆ, ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಎಸ್‌ಬಿಐ ಕಚೇರಿ ರಸ್ತೆಗಳು ಸಂಪೂರ್ಣ ಮುಳುಗಡೆಯಾಗಿವೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೂ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ: ಅರೆಬೆತ್ತಲಾಗಿ ಸಹಾಯಕ್ಕೆ ಅಂಗಲಾಚಿದ ಸಂತ್ರಸ್ತೆಗೆ ಬಿಡಿಗಾಸಿನ ನೆರವು – ಬಾಲಕಿ ಯಾತನೆಯನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಉಜ್ಜಯಿನಿ ಪೊಲೀಸ್
Advertisement
Advertisement
ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಪರದಾಡುತ್ತಾ ಸಂಚಾರ ಮಾಡುತ್ತಿದ್ದು, ನಗರದ ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹೈದರಾಬಾದ್ ರಸ್ತೆ, ಹಾರಿಗೇರಿ ಕಮಾನ್ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿ, ಬಟರ್ ಚಿಕನ್, ಲ್ಯಾಂಬ್ ಚಾಪ್ಸ್; ಭಾರತದಲ್ಲಿ ಪಾಕ್ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ
Advertisement
ರಸ್ತೆ ಪಕ್ಕದಲ್ಲಿ ನಿಂತ್ತಿದ್ದ ಬೈಕ್‌ಗಳು ನೀರಿನಲ್ಲಿ ಮುಳುಗಿಹೋಗಿವೆ. ವರುಣನ ಅಬ್ಬರಕ್ಕೆ ಗಡಿ ಜಿಲ್ಲೆಯ ಜನರು ತತ್ತರಿಸಿದ್ದು ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
Web Stories