ಬೆಂಗಳೂರು: ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗ್ತಿದೆ.
ಯಶವಂತಪುರ, ಪೀಣ್ಯ, ಮಲ್ಲೇಶ್ವರಂ, ಮೆಜೆಸ್ಟಿಕ್, ಎಂಜಿ ರೋಡ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ ಸೇರಿದಂತೆ ರಾಜ್ಯ ರಾಜಧಾನಿಯ ಹಲವೆಡೆ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯ ತುಂಬೆಲ್ಲಾ ಮೊಣಕಾಲುವರೆಗೂ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಇನ್ನು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲಾಗುತ್ತಿಲ್ಲ. ಕೋರಮಂಗಲ ಸೇರಿದಂತೆ ಬೆಂಗಳೂರಿನ ಬಹುತೇಕ ರಸ್ತೆಗಳು ಕೆರೆಗಳಾಂಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇಂದು ಬೆಳಗ್ಗೆಯೂ ಮಳೆ ಮುಂದುವರದಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಕೋರಮಂಗಲದ ರಸ್ತೆಗಳು ಕೆರೆಗಳಂತಾಗಿವೆ. ಎಸ್‍ಟಿ ಬೆಡ್ ಲೇಔಟ್ ಏರಿಯಾ ಸಂಪೂರ್ಣ ಜಲಾವೃತವಾಗಿದೆ.