ಹಾವೇರಿ: ಹಾನಗಲ್(Hanagal) ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳು ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಭರ್ಜರಿ ರೋಡ್ ಶೋ ನಡೆಸಿರುವ ಘಟನೆ ಹಾವೇರಿ(Haveri) ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ನಡೆದಿದೆ.
ಕಳೆದ 3 ದಿನಗಳ ಹಿಂದೆ ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೆ(Akki Alur) ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. 5 ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರ ಜೊತೆ ಅಕ್ಕಿ ಆಲೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿರೋ ವೀಡಿಯೋಗಳು ವೈರಲ್ ಆಗಿದೆ. ಇದನ್ನೂ ಓದಿ: ಯೂಟ್ಯೂಬ್ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್, ವಿಜಯಲಕ್ಷ್ಮಿಗೆ ಸಮನ್ಸ್
ಕಳೆದ 3 ದಿನಗಳ ಹಿಂದೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಸಂತ್ರಸ್ತೆ ಆರೋಪಿಗಳನ್ನು ಗುರುತಿಸಲು ವಿಫಲವಾದ ಹಿನ್ನಲೆ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ
ಎ1 ಆರೋಪಿ ಅಪ್ತಾಬ್ ಚಂದನಕಟ್ಟಿ, ಎ2 ಮದರ್ ಸಾಬ್ ಮಂಡಕ್ಕಿ, ಎ3 ಸಮಿವುಲ್ಲಾ ಲಾಲನವರ, ಎ4 ಮಹಮದ್ ಸಾದಿಕ್ ಅಗಸಿಮನಿ, ಎ8 ಶೊಯಿಬ್ ಮುಲ್ಲಾ, ಎ11 ತೌಸಿಪ್ ಚೋಟಿ, ಎ13 ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಬೆಂಗಳೂರು ಕಂಪನಿಯಿಂದ ದೇಶದ ಮೊದಲ ಎಐ ಆಧಾರಿತ ಆಟೋಪೈಲಟ್ ಕಾರು ಅಭಿವೃದ್ಧಿ
2024, ಜನವರಿ 8ರಂದು ಹಾನಗಲ್ ಹೊರವಲಯದಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜೈಲುಪಾಲಾಗಿದ್ದ 19 ಆರೋಪಿಗಳ ಪೈಕಿ 12 ಆರೋಪಿಗಳು 10 ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು. ಆದರೆ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಗಳನ್ನು ಹಲವು ಬಾರಿ ನ್ಯಾಯಾಲಯ ತಿರಸ್ಕರಿಸಿತ್ತು. ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ್ದ ಹೇಳಿಕೆಗಳನ್ನು ಉಳಿಸಿಕೊಳ್ಳಲು ವಿಫಲವಾದ ಹಿನ್ನಲೆ ಆರೋಪಿಗಳಿಗೆ ಈಗ ಜಾಮೀನು ಸಿಕ್ಕಿದೆ. ಇದನ್ನೂ ಓದಿ: ಮಂಗಳೂರು | ಮದುವೆಯ ವಿಚಾರಕ್ಕೆ ಕಿರಿಕ್ – ಸಂಧಾನಕ್ಕೆ ಬಂದಿದ್ದ ನೆಂಟನ ಬರ್ಬರ ಹತ್ಯೆ
ಆರೋಪಿಗಳು ಜಾಮೀನು ಸಿಕ್ಕ ಬೆನ್ನಲ್ಲೇ ಕಾರಿನಲ್ಲಿ ರೋಡ್ ಶೋ ನಡೆಸಿರುವುದು ಜಿಲ್ಲೆಯ ಜನರ ಆಕ್ರೋಶ ಕಾರಣವಾಗಿದೆ. ಪೊಲೀಸ್ ಇಲಾಖೆ ಮತ್ತೆ ಪ್ರಕರಣ ದಾಖಲಿಸಿಕೊಂಡು ಜಾಮೀನು ರದ್ದು ಮಾಡುವಂತೆ ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.