ChikkamagaluruDistrictsKarnatakaLatestMain Post

ನನ್ನ ಗಾಡಿಗೆ ನಾನೇ ಬೆಂಕಿ ಹಚ್ಚುತ್ತೇನೆ- ಅಧಿಕಾರಿಗಳ ಎದುರೇ ಗಾಡಿಗೆ ಬೆಂಕಿ ಹಚ್ಚಿದ ವ್ಯಾಪಾರಿ

ಚಿಕ್ಕಮಗಳೂರು: ನನ್ನ ಗಾಡಿ ಮುಟ್ಟಬೇಡಿ, ನಾನೇ ಬೆಂಕಿ ಹಚ್ಚುತ್ತೇನೆ ಎಂದು ನಗರಸಭೆ ಅಧಿಕಾರಿಗಳ ಎದುರು ವ್ಯಾಪಾರಿ ಗಾಡಿಗೆ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯ ಬೀದಿಯಲ್ಲಿ ಪ್ರತಿನಿತ್ಯ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು 200-300 ರೂ. ದುಡಿದು ಕಷ್ಟಪಟ್ಟು ಜೀವನ ನಡೆಸುತ್ತಿದ್ದರು. ಆದರೆ ನಗರಸಭೆ ಅಧಿಕಾರಿಗಳು ರಸ್ತೆ ಬದಿ ವ್ಯಾಪಾರ ನಡೆಸಬಾರದು ಎಂದು ವ್ಯಾಪಾರಿಗಳಿಗೆ ಸೂಚಿಸಿದ್ದರು.

ಈ ರಸ್ತೆಯಲ್ಲೇ ವ್ಯಾಪಾರ ನಡೆಸುತ್ತಿದ್ದವರಲ್ಲಿ ಬಡ ವ್ಯಾಪಾರಿಯೊಬ್ಬ ಹಣ್ಣು ತರಕಾರಿಗಳನ್ನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇಂದು ಈ ವ್ಯಾಪಾರಿಯ ಗಾಡಿಯನ್ನು ಹೊತ್ತೊಯ್ಯಲು ನಗರಸಭೆ ಸಿಬ್ಬಂದಿ ಬಂದಿದ್ದರು. ಇದರಿಂದ ರೊಚ್ಚಿಗೆದ್ದ ಬಡ ವ್ಯಾಪಾರಿಯು, ನಮ್ಮ ಹೊಟ್ಟೆ ಮೇಲೆ ಹೊಡಿಯುತಿದ್ದೀರಾ, ನಾನೇ ಬೆಂಕಿ ಹಾಕ್ತೀನಿ ಎಂದು ತನ್ನ ಗಾಡಿಗೆ ತಾನೇ ಬೆಂಕಿ ಹಾಕಿ ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇದನ್ನೂ ಓದಿ: ಸಂಕಷ್ಟದಲ್ಲಿರುವ ಲಂಕಾಕ್ಕೆ ಭಾರತದಿಂದ ಪೆಟ್ರೋಲ್

ಈ ಬಗ್ಗೆ ತನ್ನ ಅಳಲು ತೋಡಿಕೊಂಡಿರುವ ಬಡವ್ಯಾಪಾರಿಯು, ನಗರಸಭೆ ಅವರು 500-1,000ವರೆಗೆ ಹಣ ಕೇಳುತ್ತಾರೆ. ಅದನ್ನು ಎಲ್ಲಿಂದ ತಂದು ಕೊಡ್ಲಿ. ಫೈನಾನ್ಸ್‌ಗೆ ಹಣ ಕಟ್ಟುವುದೇ ಕಷ್ಟವಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಇವರಿಗೆ ಹೇಗೆ ನೀಡುವುದು ಎಂದು ಬೇಸರ ವ್ಯಕ್ತಪಡಿಸಿದ್ದಾನೆ. ಇದೀಗ ಚಿಕ್ಕಮಗಳೂರು ನಗರಸಭೆಯ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಂಪತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಮಾಂಗಲ್ಯ, ಹಣ ಸುಲಿಗೆ ಮಾಡಿ ಪರಾರಿ

Leave a Reply

Your email address will not be published.

Back to top button