ಕೋಲಾರ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಅವರ ಬಳಿ ಇದ್ದ 3.40 ಲಕ್ಷ ರೂ.ಗಳನ್ನು ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಚಿಕ್ಕತಿರುಪತಿ ಗ್ರಾಮದ ವೆಂಕಟೇಶ್ ಗೌಡ ಎಂಬುರ ಮೇಲೆ ಖಾರದ ಪುಡಿ ಎರಚಿ ದರೋಡೆ ಮಾಡಲಾಗಿದ್ದು, ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಚಿಕ್ಕತಿರುಪತಿ ಬಳಿ ಘಟನೆ ನಡೆದಿದೆ. ವೆಂಕಟೇಶ್ ಅವರು ಚಿಕ್ಕತಿರುಪತಿ ದೇವಾಲಯದ ಸಮಿತಿಯ ಸದಸ್ಯರಾಗಿದ್ದು, ಸಂಜೆ 5.30ರ ವೇಳೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಮಾಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವೆಂಕಟೇಶ್ ಅವರು ಹಣದೊಂದಿಗೆ ತೆರಳುತ್ತಿದ್ದ ಮಾಹಿತಿ ತಿಳಿದಿರುವವರೇ ಕೃತ್ಯ ನಡೆಸಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ.