ರಾಯಚೂರು: ಭಕ್ತರ ಸೋಗಿನಲ್ಲಿ ಬಂದು ಚಿತ್ತರಗಿ ವಿಜಯ ಮಹಾಂತೇಶ್ವರ ಶಾಖಾ ಮಠದ (Mahanteshwar Math) ಪೀಠಾಧಿಪತಿಗೆ ಹೆದರಿಸಿ ಚಿನ್ನಾಭರಣ, ನಗದು ಸೇರಿದಂತೆ ಸುಮಾರು 35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ ಘಟನೆ ಲಿಂಗಸುಗೂರಿನಲ್ಲಿ ನಡೆದಿದೆ.
ಪಟ್ಟಣದ ಬಸವಸಾಗರ ರಸ್ತೆಯಲ್ಲಿರುವ ಮಠದ ಸಿದ್ಧಲಿಂಗ ಸ್ವಾಮೀಜಿಗಳಿಗೆ ಹೆದರಿಸಿ ಸುಲಿಗೆಕೋರರು 20 ರಿಂದ 25 ಲಕ್ಷ ರೂ. ನಗದು, 80 ಗ್ರಾಂ ಚಿನ್ನಾಭರಣ, 7 ಕೆ.ಜಿ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್
Advertisement
Advertisement
ಭಕ್ತರ ಸೋಗಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಕಲಬುರಗಿಯಿಂದ ಬಂದಿದ್ದೇವೆ. ರಾತ್ರಿ ಮಠದಲ್ಲಿ ಆಶ್ರಯ ಕೊಡಿ ಎಂದು ಕೇಳಿದ್ದಾರೆ. ಬಳಿಕ ನೀರು ಕೇಳುವ ನೆಪದಲ್ಲಿ ನಡುರಾತ್ರಿ ಸ್ವಾಮಿಜಿ ಕೋಣೆ ಬಾಗಿಲು ತೆಗೆಸಿ ಸುಲಿಗೆ ಮಾಡಿದ್ದಾರೆ. ಪಿಸ್ತೂಲ್ ರೀತಿಯ ಆಯುಧ ಹಿಡಿದು ಬೆದರಿಸಿ ಸುಲಿಗೆ ಮಾಡಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.
Advertisement
Advertisement
ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ- ಸಿಬಿಐಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್