ಚಾಮರಾಜನಗರ: ನೀರು ಕೇಳುವ ನೆಪದಲ್ಲಿ ಚಾಕು ತೋರಿಸಿ ಕಬ್ಬಿಣದ ವಸ್ತುಗಳನ್ನು ದರೋಡೆ ಮಾಡಿದ್ದ ಮೂವರನ್ನು ಚಾಮರಾಜನಗರ ಜಿಲ್ಲೆಯ ಪೊಲೀಸರು (Police) ಬಂಧಿಸಿದ್ದಾರೆ. (Arrest)
ಚಾಮರಾಜನಗರ (Chamarajanagar) ಸಮೀಪದ ಮಾದಾಪುರದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ನೀರು ಕೇಳುವ ನೆಪದಲ್ಲಿ ಕಾಂಕ್ರೀಟ್ ಪ್ಲಾಂಟ್‍ನಲ್ಲಿ, 1.64 ಲಕ್ಷ ಮೌಲ್ಯದ ಕಬ್ಬಿಣದ ವಸ್ತುಗಳನ್ನು 6 ಮಂದಿ ದರೋಡೆ ಮಾಡಿದ್ದರು. ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಲ್ಲದೇ ಮೂವರನ್ನು ಬಂಧಿಸಲಾಗಿದೆ. ಮೈಸೂರು ಮೂಲದ ನದೀಂಖಾನ್, ತನು, ಶಹಬ್ಬಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲೂ ಇದೆ ಐಸಿಸ್ ಗ್ಯಾಂಗ್ – ಮೂವರು ಶಂಕಿತ ಉಗ್ರರ ವಿರುದ್ಧ ಎಫ್‌ಐಆರ್
Advertisement
Advertisement
ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಈ ಮೂವರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇನ್ನು ಬಂಧಿತರಿಂದ ಲಕ್ಷಾಂತರ ಮೌಲ್ಯದ ಕಳ್ಳತನ ಮಾಡಿದ ವಸ್ತುಗಳು, ಒಂದು ಕಾರು, ಒಂದು ಗೂಡ್ಸ್ ಆಟೋ, ಮೊಬೈಲ್, ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಅಡುಗೆ ಮಾಡುವ ಮುನ್ನ ಅಕ್ಕಿ ತೊಳೆದಿರಲಿಲ್ಲ- 31 ವಿದ್ಯಾರ್ಥಿಗಳು ಅಸ್ವಸ್ಥ