Connect with us

ರಾಬರ್ಟ್ ಸಿನಿಮಾ ಪೈರಸಿ – ವ್ಯಕ್ತಿ ವಿರುದ್ಧ ಕೇಸ್ ದಾಖಲು

ರಾಬರ್ಟ್ ಸಿನಿಮಾ ಪೈರಸಿ – ವ್ಯಕ್ತಿ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಪೈರಸಿ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 11ರಂದು ರಾಬರ್ಟ್ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಅದ್ದೂರಿ ಪ್ರದರ್ಶನ ಕಾಣುತ್ತಿದೆ. ಕನ್ನಡದಲ್ಲಿ ಮಾತ್ರವಲ್ಲದೆ ತೆಲುಗಿನಲ್ಲಿ ಕೂಡ ಭಾರೀ ಸದ್ದು ಮಾಡುತ್ತಿರುವ ರಾಬರ್ಟ್ ಸಿನಿಮಾ ಬಾಕ್ಸ್ ಆಫಿಸ್‍ನನ್ನು ಕೊಳ್ಳೆ ಹೊಡೆಯುತ್ತಿದೆ. ನಟ ದರ್ಶನ್‍ಗೆ ರಾಬರ್ಟ್ ಸಿನಿಮಾ ಹೊಸ ಇಮೇಜ್ ಜೊತೆಗೆ ಉತ್ತುಂಗಕ್ಕೆ ಏರಿಸಿದೆ.

ಹೀಗೆ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ರಾಬರ್ಟ್ ಸಿನಿಮಾದಲ್ಲಿ ದರೋಡೆ ಮಾಡುವ ದೃಶ್ಯದ ಭಾಗವನ್ನು ಪೈರಸಿ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ಬೆಂಗಳೂರು ಡಿಸಿಪಿ ತಿಳಿಸಿದ್ದಾರೆ.

ಈ ಮುನ್ನ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ, ಯಾರಾದರೂ, ಪೈರಸಿ ಮಾಡಿ ಸಿಕ್ಕಿಹಾಕಿಕೊಂಡಲ್ಲಿ ಪರಿಣಾಮ ಘೋರವಾಗಿರುತ್ತದೆ. ನಾನಂತೂ ಪೈರಸಿ ಮಾಡಿದವರನ್ನು ಕೋರ್ಟ್-ಕಚೇರಿ ಅಂತ ಅಲೆಸಿ, ಅಲ್ಲೇ ತಮ್ಮ ಜೀವನವನ್ನು ಕಳೆಯುವಂತೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

Advertisement
Advertisement
Advertisement