ಕನ್ನಡದ ಪ್ರೇಕ್ಷಕರು ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಯಶಸ್ವಿಗೊಳಿಸುತ್ತಿದ್ದಾರೆ. ಅಂತಹ ಉತ್ತಮ ಕಂಟೆಂಟ್ ಹೊಂದಿರುವ ಮತ್ತೊಂದು ಚಿತ್ರ ‘ಯಥಾಭವ’. ಗೌತಮ್ ಬಸವರಾಜು (Gautam Basavaraju) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ. ಯಥಾಭವ ಚಿತ್ರದ ಪೋಸ್ಟರ್ ವಿಭಿನ್ನವಾಗಿದ್ದು ಕುತೂಹಲ ಮೂಡಿಸಿದೆ.
Advertisement
Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಉತ್ಸವ್ ಶ್ರೇಯ್ ಸಂಗೀತ ನಿರ್ದೇಶನ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸಂಚಿತ್ ಚವನ್ ನೃತ್ಯ ನಿರ್ದೇಶನ ಹಾಗೂ ಸ್ಮಿತ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ. ಇದನ್ನೂ ಓದಿ:ನೀಲಿ ತಾರೆ ಮಿಯಾ ತೆಲುಗಿನ ಡೈರೆಕ್ಟರ್ ಆರ್‌ಜಿವಿ
Advertisement
Advertisement
ಯಥಾಭವ (Yathabhava) ಕೋರ್ಟ್ ರೂಮ್ ಡ್ರಾಮ ಕಥಾಹಂದರ ಹೊಂದಿದೆ. ಇದು ನಿರ್ದೇಶಕರ ಮೊದಲ ನಿರ್ದೇಶನದ ಚಿತ್ರ. ಪವನ್ ಶಂಕರ್ (Pawan Shankar) ಈ ಚಿತ್ರದ ನಾಯಕನಾಗಿ ಹಾಗೂ ಸಹನ ಸುಧಾಕರ್ ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ (Gautam Sudhakar) ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಮೂಲಕ ಗೌತಮ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
Advertisement
ಹಿರಿಯ ನಟ ದತ್ತಣ್ಣ ನ್ಯಾಯಾಧೀಶರ ಪಾತ್ರ ನಿರ್ವಹಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಬಾಲ ರಾಜವಾಡಿ, ಮಾಸ್ಟರ್ ಸುಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Web Stories