ಟೋಕಿಯೊ: ಜಪಾನಿನ ಬಾಹ್ಯಾಕಾಶ ಸಂಸ್ಥೆ (Japan Space Agency) ಅಭಿವೃದ್ಧಿಪಡಿಸಿದ್ದ ರಾಕೆಟ್ ಶುಕ್ರವಾರ ಪರೀಕ್ಷೆಯ ಸಮಯದಲ್ಲಿ ಸ್ಫೋಟಗೊಂಡಿದೆ. ಆದ್ರೆ ಯಾವುದೇ ಹಾನಿಯಾಗಿಲ್ಲ ಎಂದು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಷನ್ ಏಜೆನ್ಸಿ (JAXA) ತಿಳಿಸಿದೆ.
ಉತ್ತರ ಜಪಾನ್‌ನಲ್ಲಿರುವ ಏರೋಸ್ಪೇಸ್ ಎಕ್ಸ್ ಪ್ಲೋರೇಷನ್ ಏಜೆನ್ಸ್ (ಜೆಎಎಕ್ಸ್‌ಎ) ಟೆಸ್ಟಿಂಗ್ ಕೇಂದ್ರದಲ್ಲಿ ಎಪ್ಸಿಲಾನ್ ಎಸ್. ಎಂಬ ಎಂಜಿನ್ (Epsilon Engine) ಸ್ಪೋಟಗೊಂಡಿದೆ. ಇದರಿಂದಾಗಿ ಜಪಾನ್ ಬಾಹ್ಯಾಕಾಶ ಮಹತ್ವಾಕಾಂಕ್ಷೆಯ ಯೋಜನೆಗೆ ಹಿನ್ನಡೆಯಾಗಿದೆ. ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲೂ ಸತತ ವೈಫಲ್ಯ ಅನುಭವಿಸಿತ್ತು.
ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪರೀಕ್ಷೆಗೆ ಚಾಲನೆ ನೀಡಿದಾಗ ಸುಮಾರು 1 ನಿಮಿಷದ ನಂತರ ಎಂಜಿನ್ ಸ್ಫೋಟಗೊಂಡಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜೆಎಎಕ್ಸ್‌ಎ ತಿಳಿಸಿದೆ. ಇದನ್ನೂ ಓದಿ: ಚಂದ್ರಯಾನ-3 ಭಾರತದ ಭರವಸೆ, ಕನಸುಗಳನ್ನ ಹೊತ್ತೊಯ್ಯಲಿದೆ – ಪ್ರಧಾನಿ ಶುಭಹಾರೈಕೆ
ಭಾರತದಲ್ಲಿ ಉಡಾವಣೆ ಯಶಸ್ವಿ:
ಇತ್ತ ಭಾರತದಲ್ಲಿ ಬಾಹುಬಲಿ ರಾಕೆಟ್ ಎಲ್‌ವಿಎಂ3- ಎಂ4 ಮೂಲಕ ಚಂದ್ರಯಾನ-3ರ (Chandrayaan-3) ಉಡಾವಣೆ ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿತು. ಇದನ್ನೂ ಓದಿ: ಅಮೆರಿಕದ 1 ನಿರ್ಧಾರ – ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ವಾವಲಂಬಿಯಾದ ಭಾರತ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]