ಕೊರೊನಾ (Corona) ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದಲೂ ರಾಕಿಂಗ್ ಸ್ಟಾರ್ ಯಶ್ (Yash) ಹುಟ್ಟುಹಬ್ಬ (Birthday) ಸಂಭ್ರಮದಿಂದ ನೋಡದ ಅಭಿಮಾನಿಗಳು ಈ ವರ್ಷದಲ್ಲಿ ಅದ್ಧೂರಿಯಾಗಿ ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ.
View this post on Instagram
ಅಲ್ಲದೇ ಹುಟ್ಟುಹಬ್ಬದ ದಿನದಂದೇ ಯಶ್ (Yash) 400 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಚಿತ್ರದ ಹೆಸರು ಘೋಷಣೆ ಮಾಡಲು ಮುಂದಾಗಿರುವುದು ಅಭಿಮಾನಿಗಳಿಗೆ ಡಬ್ಬಲ್ ಧಮಾಕ ನೀಡಿದಂತಾಗಿದೆ. ಇದನ್ನೂ ಓದಿ: ಯಶ್ ಹೊಸ ಸಿನಿಮಾದ ಬಜೆಟ್ ಬರೋಬ್ಬರಿ 400 ಕೋಟಿ: ಜ.8ಕ್ಕೆ ಘೋಷಣೆ
ಹುಟ್ಟುಹಬ್ಬಕ್ಕೆ ಇನ್ನೂ ಮೂರೇ ದಿನಗಳು ಬಾಕಿಯಿದ್ದು, ರಾಜ್ಯಾದ್ಯಂತ ಮಾತ್ರವಲ್ಲದೇ ದೇಶಾದ್ಯಂತ ಸಂಭ್ರಮದಿಂದ ಕೊಂಡಾಡಲು ಕಾಯುತ್ತಿದ್ದಾರೆ. ಆದ್ರೆ ರಾಕಿಭಾಯ್ ಅಭಿಮಾನಿಗಳಿಗೆ ಯಶ್ ನಿರಾಸೆ ಉಂಟುಮಾಡಿದ್ದಾರೆ. ಇದನ್ನೂ ಓದಿ: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್
ಅಭಿಮಾನಿಗಳಿಗೆ ಯಶ್ ಸಂದೇಶ:
`ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ… ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದೆ ಇತ್ತೀಚಿನ ವರ್ಷಗಳಲ್ಲಿ. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ. ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ. ಕ್ಷಮಿಸಿ ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ನಿಮ್ಮ ಪ್ರೀತಿಯ ಯಶ್ ಎಂದು ಅಭಿಮಾನಿಗಳಿಗೆ ಪತ್ರ ಸಂದೇಶ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k