ಬೆಂಗಳೂರು: ಸ್ಯಾಂಡಲ್ವುಡ್ ನಟ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 36ನೇ ವಸಂತಕ್ಕೆ ಕಾಲಿಟ್ಟಿರುವ ಅವರು ಕುಟುಂಬದವರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಓಮಿಕ್ರಾನ್, ಕೊರೊನಾ ಸೋಂಕಿನ ಭೀತಿ ಎಲ್ಲೆಡೆ ಇರುವುದರಿಂದ ಮನೆಯಲ್ಲಿಯೇ ಆಚರಿಸಿಕೊಳ್ಳುತ್ತಿದ್ದಾರೆ. ಯಶ್ ಜನ್ಮದಿನವಾದ ಇಂದು ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ ಇದೆ. ಈ ಕಾರಣಕ್ಕೆ ಯಶ್ ಮನೆ ಸಮೀಪ ತೆರಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೋಶಿಯಲ್ ಮೀಡಿಯಾ ಮೂಲಕವಾಗಿ ಶುಭಕೋರುತ್ತಿದ್ದಾರೆ. ಇದನ್ನೂ ಓದಿ: ಚಿರು ಹುಟ್ಟುಹಬ್ಬದ ನೆನಪಿನಲ್ಲಿ ಮೇಘನಾ ಹೊಸ ಸಿನಿಮಾ ಘೋಷಣೆ
ಯಶ್ ಜನ್ಮದಿನಕ್ಕೆ ಕೇವಲ ಕರ್ನಾಟಕದ ಫ್ಯಾನ್ಸ್ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತಮಿಳು ನಾಡು, ಮಹಾರಾಷ್ಟ್ರ ಮೊದಲಾದ ರಾಜ್ಯಗಳ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ. ಯಶ್ ಹೆಸರು ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ. ಯಶ್ ಅವರ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಶೂಟಿಂಗ್ನಲ್ಲಿ ಪಾಲ್ಗೊಂಡ ಮೇಘನಾ ರಾಜ್
2007ರಲ್ಲಿ ತೆರೆಗೆ ಬಂದ ಜಂಬದ ಹುಡುಗಿ ಚಿತ್ರದ ಮೂಲಕ ಚಂದನವನ ಪ್ರವೇಶಿಸಿದ್ದರು. 2014ರಲ್ಲಿ ತೆರೆಗೆ ಬಂದ Mr & Mrs ರಾಮಾಚಾರಿ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ನಂತರ ಯಶ್ ಅವರ ಲಕ್ ಬದಲಾಯಿತ್ತು. ಒಳ್ಳೆಯ ಪಾತ್ರಗಳು ಅವರ ಪಾಲಿಗೆ ಒಲಿದು ಬಂದವು.
ಯಶ್ ನಟನೆಯ ಕೆಜಿಎಫ್ ಸಿನಿಮಾದಿಂದ ಕನ್ನಡ ಚಿತ್ರರಂಗದ ದಿಕ್ಕೆ ಬದಲಾಯಿತು. ರಾಕಿಂಗ್ ಸ್ಟಾರ್ ಯಶ್ ಅವರ ರೇಂಜ್ ಕೂಡ ಬದಲಾಗಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾ ಏಪ್ರಿಲ್ 14 ರಂದು ತೆರೆಗೆ ಬರಲಿದೆ. ಈ ಸಿನಿಮಾವನ್ನು ಪರದೆ ಮೇಲೆ ನೋಡಲು ಅವರ ಅಭಿಮಾನಿಗಳ ಬಳಗ ಮತ್ತು ಸಿನಿಪ್ರಿಯರು ಕಾದು ಕುಳಿತಿದ್ದಾರೆ.