ಬೆಂಗಳೂರು: ಇತ್ತೀಚೆಗಷ್ಟೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಗಡ್ಡವನ್ನು ತೆಗೆದು ಸುದ್ದಿಯಾಗಿದ್ದರು. ಈಗ ಫೇಸ್ ಬುಕ್ ಕಮೆಂಟ್ ಮೂಲಕ ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ‘ಕೆಜಿಎಫ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.
ನಟ ಯಶ್ ಅವರು ಅಭಿಮಾನಿಯೊಬ್ಬರು `ಕೆಜಿಎಫ್’ ಸಿನಿಮಾದ ಟ್ರೇಲರ್ ಯಾವಾಗ ಬಿಡುಗಡೆಗೊಳ್ಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಯಶ್ ಅವರು ಟ್ರೇಲರ್ ಬಿಡುಗಡೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ನಟರಾಜ್ ಗೌಡ ಎಂಬವರು ಫೇಸ್‍ಬುಕ್ ನಲ್ಲಿ “ಬಾಸ್ ಕೆಜಿಎಫ್ ಟ್ರೇಲರ್ ಯಾವಾಗ ಬರುತ್ತದೆ ಹೇಳಿ, ನಾನು ಕಾಯುತ್ತಿದ್ದೇನೆ” ಎಂದು ಕಮೆಂಟ್ ಮಾಡಿದ್ದಾರೆ. ನಟರಾಜ್ ಮಾಡಿದ ಕಮೆಂಟ್ ಗೆ ಯಶ್ “ಅಕ್ಟೋಬರ್ ನಲ್ಲಿ ಟ್ರೇಲರ್ ಬಿಡುಗಡೆಯಾಗುತ್ತದೆ” ಎಂದು ರೀ ಕಮೆಂಟ್ ಮಾಡಿದ್ದಾರೆ.
Advertisement
ಈ ಹಿಂದೆ `ಕೆಜಿಎಫ್’ ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು, ಭಾರೀ ಸದ್ದು ಮಾಡಿತ್ತು. ಕೆಜಿಎಫ್ ಸಿನಿಮಾವನ್ನು `ಉಗ್ರಂ’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ಹೊಂಬಾಳೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿದೆ.
Advertisement
ಈ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ಇದೇ ಮೊದಲ ಬಾರಿಗೆ ಸ್ಯಾಂಡಲ್‍ವುಡ್ ನಲ್ಲಿ ನಾಯಕಿಯಾಗಿ ಯಶ್ ಜೊತೆ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಹಳೆಯ ಐಟಂ ಹಾಡಿಗೆ ಬಾಲಿವುಡ್ ಬೆಡಗಿ ಮಿಲ್ಕಿ ಬ್ಯೂಟಿ ಕ್ವೀನ್ ತಮನ್ನಾ ಭಾಟಿಯಾ ಅವರು ಯಶ್ ಜೊತೆ ಹೆಜ್ಜೆ ಹಾಕಿದ್ದಾರೆ. ಸದ್ಯಕ್ಕೆ ನಟ ಯಶ್ ಗ್ಯಾಪ್ ಕೊಡದೆ `ಮೈ ನೇಮ್ ಇಸ್ ಕಿರಾತಕ’ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv