ನವದೆಹಲಿ: ರೋಹಿಂಗ್ಯಾ ಮುಸ್ಲಿಮರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.
ರೋಹಿಂಗ್ಯ ಮುಸ್ಲಿಮರು ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅಷ್ಟೇ ಅಲ್ಲದೇ ನೆಲೆಸಿರುವ ಮಂದಿ ಪೈಕಿ ಕೆಲವರು ಪಾಕಿಸ್ತಾನದ ಐಎಸ್‍ಐ ಮತ್ತು ಐಸಿಸ್ ಉಗ್ರರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.
Advertisement
15 ಪುಟಗಳ ಅಫಿಡವಿಟ್‍ನಲ್ಲಿ ಸರ್ಕಾರ ಮ್ಯಾನ್ಮಾರ್, ಪಶ್ಚಿಮ ಬಂಗಾಳ, ತ್ರಿಪುರದಲ್ಲಿ ಒಂದು ಸಂಘಟನಾ ಜಾಲವೇ ಇದೆ ಎಂದು ಸರ್ಕಾರ ಮಾಹಿತಿಯನ್ನು ಕೋರ್ಟ್ ಗೆ ನೀಡಿದೆ.
Advertisement
ಎಲ್ಲ ದೇಶಗಳಂತೆ ವಲಸೆಗೆಂದು ಬರುವ ಜನರ ಮೇಲೆ ನಮಗೆ ಅನುಕಂಪವಿದೆ. ಆದರೆ ವಿಶೇಷವಾಗಿ ಈ ಪ್ರಕರಣದಲ್ಲಿ ದೇಶದ ಭದ್ರತೆ ವಿಚಾರವೂ ಇರುವ ಕಾರಣ ಈ ಅನುಕಂಪ ದುರ್ಬಳಕೆಯಾಗಬಾರದು ಎಂದು ಹೇಳಿದೆ.
Advertisement
ಗುಪ್ತಚರ ವರದಿಗಳು ಅಧಿಕೃತವಾಗಿ ಪಾಕಿಸ್ತಾನ ಮೂಲದ ಉಗ್ರರು ಮತ್ತು ಇತರ ದೇಶಗಳಲ್ಲಿರುವ ಉಗ್ರರ ಜೊತೆ ರೋಹಿಂಗ್ಯಾ ಮುಸ್ಲಿಮರಿಗೆ ಸಂಪರ್ಕವಿದೆ ಎನ್ನುವ ಮಾಹಿತಿಯನ್ನು ನೀಡಿವೆ. ಅಷ್ಟೇ ಅಲ್ಲದೇ ದೇಶದಲ್ಲಿರುವ ಬೌದ್ಧರ ಮೇಲೆ ಹಿಂಸಾಚಾರ ನಡೆಯುವ ಭೀತಿಯೂ ಇದೆ ಎಂದು ಅಫಿಡವಿತ್ ನಲ್ಲಿ ಸರ್ಕಾರ ಹೇಳಿದೆ.
Advertisement
ವಲಸಿಗರ ನೀತಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ನೀತಿಗೆ ಭಾರತ ಬದ್ಧವಾಗಿದೆ. ಆದರೆ ಇದರ ಜೊತೆಗೆ ದೇಶದಲ್ಲಿರುವ ಪ್ರಜೆಗಳ ಮಾನವ ಹಕ್ಕುಗಳ ರಕ್ಷಣೆಯನ್ನು ಕಾಪಾಡುವ ಹೊಣೆಗಾರಿಕೆಯೂ ನಮ್ಮ ಮೇಲಿದೆ ಎಂದು ತಿಳಿಸಿದೆ.
ಕೇಂದ್ರದ ಅಫಿಡವಿಟ್ ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರ, ಈ ಪ್ರಕರಣ ಮೊದಲು ಅವರು ಅಕ್ರಮ ವಲಸಿಗರೇ ಎನ್ನುವುದನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿದ್ದಾರೆ.
ಏನಿದು ಪ್ರಕರಣ?
ಮ್ಯಾನ್ಮಾರ್‍ನ ದಕ್ಷಿಣದಲ್ಲಿರುಗ ರಾಖೈನ್ ರಾಜ್ಯದಲ್ಲಿ ರೋಹಿಂಗ್ಯಾ ಜನರಿದ್ದಾರೆ. ಬೌದ್ಧರೆ ಹೆಚ್ಚಾಗಿರುವ ಈ ದೇಶದಲ್ಲಿ ಈಗ ರೋಹಿಂಗ್ಯಾಮುಸ್ಲಿಮರ ಮೇಲೆ ದೌರ್ಜನ್ಯ ಆಗುತ್ತಿದ್ದು ಭಾರತ, ಬಾಂಗ್ಲಾದೇಶಕ್ಕೆ ವಲಸೆ ಬರುತ್ತಿದ್ದಾರೆ. ಭದ್ರತೆ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರ ವಲಸೆಗಾರರನ್ನು ದೇಶದಿಂದ ಹೊರ ಹಾಕಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಇಬ್ಬರು ರೋಹಿಂಗ್ಯ ಮುಸ್ಲಿಮರು ಸುಪ್ರೀಂ ಮೊರೆ ಹೋಗಿ, ನಮಗೆ ಭಾರತದಲ್ಲಿ ನಿರಾಶ್ರಿತರ ಮಾನ್ಯತೆಯನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.
We have every reason to trust the HM rather than pay attention to some stray tweets: Dr.Jitendra Singh,Union Min on Omar Abdullah #Rohingyas pic.twitter.com/SJMIsIPPIM
— ANI (@ANI) September 18, 2017