ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಕೊನೆಗೂ ಸರ್ಕಾರ ಹುದ್ದೆ ನೀಡಿದೆ. ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಬಯಲಾಗ್ತಿದ್ದಂತೆ ಬಿಜೆಪಿ ಟೀಕಿಸಿದ ಕಾಂಗ್ರೆಸ್
ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ. ಇದನ್ನೂ ಓದಿ: ಯಾವುದೋ ಫೋನ್ ಬಂತೆಂದು ಕಾರ್ಯಕ್ರಮ ರದ್ದು ಮಾಡಿದ್ದ ಚೈತ್ರಾ ಕುಂದಾಪುರ!
Web Stories