ಮೈಸೂರು: ಮೈಸೂರಿನ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಮಾಡಿದ್ದ ಕಿಕ್ ಬ್ಯಾಕ್ ಆರೋಪಕ್ಕೆ ರೋಹಿಣಿ ಸಿಂಧೂರಿ ಸ್ಪಷ್ಟೀಕರಣ ನೀಡಿದ್ದು, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ಭಾಗ ಎಂದು ತಿರುಗೇಟು ನೀಡಿದ್ದಾರೆ.
Advertisement
ವಾಟ್ಸ್ ಅಪ್ ಗ್ರೂಪ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ರೋಹಿಣಿ ಸಿಂಧೂರಿ, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ದಾಳಿ. ತಾವು ಮಾಡಿರುವ ಅಕ್ರಮ ಮುಚ್ಚಿಕೊಳ್ಳಲು ಮತ್ತು ಮಾಡಿರುವ ಅಕ್ರಮಗಳ ಬಗ್ಗೆ ಯಾವ ಅಧಿಕಾರಿಯೂ ತನಿಖೆಗೆ ಮುಂದಾಗಬಾರದೆಂದು ಹೆದರಿಸುವ ತಂತ್ರದ ಭಾಗ ಇದು. ಇದಕ್ಕೆ ಯಾವ ಅಧಿಕಾರಿಗಳು ಹೆದರದೆ ಇರುವ ಸತ್ಯ ಬಹಿರಂಗಪಡಿಸಬೇಕೆಂದು ಗುಡುಗಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ
Advertisement
Advertisement
ಬಟ್ಟೆ ಬ್ಯಾಗ್ ಖರೀದಿ ಮಾಡಿರುವುದು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರದಲ್ಲಿ. ಇದು ಸರ್ಕಾದ ಅಧೀನ ಸಂಸ್ಥೆ. ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆಯೂ ಹಣ ಬಿಡುಗಡೆಯಾಗಿಲ್ಲ. ಇದರಲ್ಲಿ ಅಕ್ರಮ ಹೇಗೆ ಬರುತ್ತೆ? ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು. ಇದರಲ್ಲಿ ಸತ್ಯದ ಒಂದಂಶವೂ ಇಲ್ಲ. ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳಿಗೆ ಉಚಿತವಾಗಿ ಬಟ್ಟೆ ಬ್ಯಾಗ್ ನೀಡಲು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರಕ್ಕೆ ತಿಳಿಸಲಾಗಿತ್ತು. ಅವರೇ ದರ ನಿಗದಿ ಮಾಡಿ ಪತ್ರ ಕಳಿಸಿದ್ದರು. ಅದರಂತೆ ಅರ್ಡರ್ ನೀಡಲಾಗಿದೆ. ಹೇಳಿ ಕೇಳಿ ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ ರಾಜ್ಯ ಸರ್ಕಾರದ ಅಧೀನ ಸಂಸ್ಥೆ. ಇಂತಹ ಸಂಸ್ಥೆ ಜೊತೆಗಿನ ಅಧಿಕೃತ ವ್ಯವಹಾರದಲ್ಲಿ ಕಿಕ್ ಬ್ಯಾಕ್ ಪ್ರಶ್ನೆ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ
Advertisement