ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿಟ್ ಮ್ಯಾನ್

Public TV
1 Min Read
Rohit Sharma 4

ಭಾರತ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ (Rohit Sharma) ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ವಿದಾಯ ಘೋಷಿಸಿದ್ದು, ಏಕದಿನ ಕ್ರಿಕೆಟ್ ಮಾತ್ರ ಆಡುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ 2024ರಲ್ಲಿ ಟಿ2ಂ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.ಇದನ್ನೂ ಓದಿ: ಆಪರೇಷನ್ ಸಿಂಧೂರ ಬಳಿಕ ಪಾಕ್ ಸೂಪರ್ ಲೀಗ್ ತೊರೆಯಲು ಮುಂದಾದ್ರಾ ವಿದೇಶಿ ಪ್ಲೇಯರ್ಸ್‌?

18 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ಒಟ್ಟು 67 ಟೆಸ್ಟ್‌ಗಳಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳೊಂದಿಗೆ 40.57 ರನ್‌ರೇಟ್‌ನಲ್ಲಿ 4301 ರನ್ ಗಳಿಸಿದರು. ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದರು.

Rohit sharma retirment to test

ಪೋಸ್ಟ್‌ನಲ್ಲಿ ಏನಿದೆ?
ಎಲ್ಲರಿಗೂ ನಮಸ್ಕಾರ, ಬಿಳಿ ಬಣ್ಣದ ಉಡುಪಿನಲ್ಲಿ ಭಾರತವನ್ನು ಪ್ರತಿನಿಧಿಸುವುದು ಗೌರವದ ಚಿಹ್ನೆ. ಇಂದು ನಾನು ಟೆಸ್ಟ್ ಕ್ರಿಕೆಟ್‌ನಿಂದ ವಿದಾಯ ಘೋಷಿಸುತ್ತಿದ್ದೇನೆ. ಇಷ್ಟು ವರ್ಷಗಳಲ್ಲಿ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಆದರೆ ನಾನು ಏಕದಿನ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮುಂಬರುವ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕಾಗಿ ಹೊಸ ನಾಯಕನ ಆಯ್ಕೆ ಮಾಡಬೇಕಿದ್ದು, ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭ್‌ಮನ್ ಗಿಲ್ ಮತ್ತು ರಿಷಭ್ ಪಂತ್ ಹೆಸರುಗಳು ಕೇಳಿ ಬರುತ್ತಿವೆ. ಮೂಲಗಳ ಪ್ರಕಾರ, ರೋಹಿತ್ ಶರ್ಮಾ ನಂತರ ಭಾರತ ಕ್ರಿಕೆಟ್ ತಂಡದ ಟೆಸ್ಟ್ ಕ್ರಿಕೆಟ್‌ಗೆ ನಾಯಕನಾಗಲು ಶುಭಮನ್ ಗಿಲ್ ಮುಂಚೂಣಿಯಲ್ಲಿದ್ದಾರೆ.ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

Share This Article