Advertisements

ಟೀಂ ಇಂಡಿಯಾ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕ – ನಾಯಕತ್ವ ಕಳೆದುಕೊಂಡ ಕೊಹ್ಲಿ

ಮುಂಬೈ: ಟೀಂ ಇಂಡಿಯಾದಲ್ಲಿ ಮತ್ತೆ ಬದಲಾವಣೆಯ ಗಾಳಿ ಬೀಸಿದೆ. ಏಕದಿನ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ನೂತನ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ನೇಮಿಸಿದೆ.

Advertisements

ಆಯ್ಕೆ ಸಮಿತಿಯ ನಿರ್ಧಾರದ ಮೇರೆಗೆ ಟಿ20 ಮತ್ತು ಏಕದಿನ ತಂಡಕ್ಕೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ನೇಮಿಸಲಾಗಿದೆ. ಟಿ20 ನಾಯಕತ್ವ ತ್ಯಜಿಸಿದ್ದ ವಿರಾಟ್ ಕೊಹ್ಲಿ ಇದೀಗ ಏಕದಿನ ನಾಯಕತ್ವದಿಂದಲು ಕೆಳಗಿಳಿದಿದ್ದಾರೆ. ಆದರೆ ಟೆಸ್ಟ್ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಮುಂದುವರಿಯಲಿದ್ದು, ರೋಹಿತ್ ಶರ್ಮಾ ಟೆಸ್ಟ್ ತಂಡದ ಉಪನಾಯಕನಾಗಿ ಬಿಸಿಸಿಐ ನೇಮಕಮಾಡಿದೆ. ಇದನ್ನೂ ಓದಿ: ನೀವು ಇಲ್ಲಿಗೆ ಬನ್ನಿ, ನಾನು ಅಲ್ಲಿಗೆ ಬರುತ್ತೇನೆ ಅಂಪೈರ್ ಕಾಲೆಳೆದ ಕೊಹ್ಲಿ

Advertisements

ಮುಂಬರುವ ದಕ್ಷಿಣ ಆಪ್ರಿಕಾ ಪ್ರವಾಸಕ್ಕೆ ಟೆಸ್ಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ತಂಡಕ್ಕೆ ರೋಹಿತ್ ಶರ್ಮಾ ಮರಳಿದ್ದಾರೆ ಜೊತೆಗೆ ಉಪನಾಯಕನಾಗಿ ಬಡ್ತಿ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಸರಣಿ ಡಿಸೆಂಬರ್ 26 ರಿಂದ ಆರಂಭಗೊಳ್ಳಲಿದೆ. ಹೀಗಾಗಿ ಇಂದು 18 ಸದಸ್ಯರ ಟೆಸ್ಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ಮೊದಲು ತಂಡದ ಉಪನಾಯಕನಾಗಿದ್ದ ಅಜಿಂಕ್ಯಾ ರಹಾನೆ ಉಪನಾಯಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಆದರೆ ಕಳಪೆ ಪ್ರದರ್ಶನದ ನಡುವೆಯೂ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ತಂಡಕ್ಕೆ ಗೆಲುವಿನ ಶ್ರೇಯಸ್ಸು ದೊರೆಯಬೇಕು: ರಾಹುಲ್ ದ್ರಾವಿಡ್

Advertisements

ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ವೃದ್ಧಿಮಾನ್ ಸಹಾ, ಆರ್. ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್.

Advertisements
Exit mobile version