ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

Public TV
2 Min Read
rohit sharma 1

ದುಬೈ: ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಗರಿಷ್ಠ ರನ್‌ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ವಿಶೇಷ ಸಾಧನೆಗೆ ಪಾತ್ರರಾದರು.

ಹೌದು.. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ 83 ಎಸೆತಗಳಲ್ಲಿ 76 ರನ್‌ (3 ಸಿಕ್ಸರ್‌, 7 ಬೌಂಡರಿ) ಬಾರಿಸಿದ ಹಿಟ್‌ಮ್ಯಾನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂದ್ಯಶ್ರೇಷ್ಠಕ್ಕೆ ಪಾತ್ರರಾದ ಟೀಂ ಇಂಡಿಯಾದ 2ನೇ‌ ನಾಯಕ ಹಾಗೂ ವಿಶ್ವದ ನಾಲ್ಕನೇ ಕ್ಯಾಪ್ಟನ್‌ ಎಂಬ ಸಾಧನೆಗೆ ಪಾತ್ರರಾದರು. 2011ರ ಏಕದಿನ ವಿಶ್ವಕಪ್‌ ಟೂರ್ನಿಯನ್ನಿ ಎಂ.ಎಸ್‌ ಧೋನಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

rohit

ಐಸಿಸಿ ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಕ್ಯಾಪ್ಟನ್ಸ್‌
* ಕ್ಲೈವ್ ಲಾಯ್ಡ್ (ವೆಸ್ಟ್ ಇಂಡೀಸ್) – 1975 ಏಕದಿನ ವಿಶ್ವಕಪ್
* ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 2003 ಏಕದಿನ ವಿಶ್ವಕಪ್
* ಎಂ.ಎಸ್. ಧೋನಿ (ಭಾರತ) – 2011 ಏಕದಿನ ವಿಶ್ವಕಪ್
* ರೋಹಿತ್ ಶರ್ಮಾ (ಭಾರತ) – 2025 ಚಾಂಪಿಯನ್ಸ್ ಟ್ರೋಫಿ

Yuvaraj Singh MS Dhoni

ಯಾವ ವರ್ಷ – ಯಾರು ಚಾಂಪಿಯನ್ಸ್‌?
1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

Share This Article