ಮುಂಬೈ: ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ 2024ರ ಐಸಿಸಿ ಟಿ20 ವಿಶ್ವಕಪ್ (T20 World Cup 2024) ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ಭಾರತ ತಂಡವನ್ನು ಏಪ್ರಿಲ್ ಅಂತ್ಯದಲ್ಲಿ ಅಜಿತ್ ಅಗರ್ಕರ್ ಸಾರಥ್ಯದ ಆಯ್ಕೆ ಸಮಿತಿ ಪ್ರಕಟಿಸುವ ಸಾಧ್ಯತೆ ಇದೆ. ಈ ನಡುವೆ ಬಿಸಿಸಿಐ (BCCI) ಈಗಾಗಲೇ ಭಾರತ ತಂಡದ 15 ಸಂಭಾವ್ಯ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್ ಕದನ
Advertisement
ಟಿ20 ವಿಶ್ವಕಪ್ ಟೂರ್ನಿಯ ನಿಮಿತ್ತ 2024ರ ಐಪಿಎಲ್ (IPL 2024) ಟೂರ್ನಿಯು ಎಲ್ಲಾ ಆಟಗಾರರಿಗೆ ಅತ್ಯಂತ ಮಹತ್ವದ್ದಾಗಿದೆ. ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆಟಗಾರರನ್ನ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪರಿಗಣಿಸುವ ಸಾಧ್ಯತೆಯಿದೆ. ಅಂದ ಹಾಗೆ ರೋಹಿತ್ ಶರ್ಮಾ (Rohit Sharma) ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದ್ದು, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ: RCBಗೆ ‘ಹೆಡ್ಡೇಕ್’- ತನ್ನದೇ ದಾಖಲೆ ಮುರಿದು IPLನಲ್ಲಿ ಮತ್ತೆ ಇತಿಹಾಸ ನಿರ್ಮಿಸಿದ ಹೈದರಾಬಾದ್
Advertisement
Advertisement
ಫೇಕ್ ನ್ಯೂಸ್ ಬಗ್ಗೆ ಹಿಟ್‌ಮ್ಯಾನ್ ಸ್ಪಷ್ಟನೆ:
2024ರ ಟಿ20 ವಿಶ್ಚಕಪ್ ಟೂರ್ನಿಯಲ್ಲಿ ರೋಹಿತ್ ಜೊತೆಗೆ ಆರಂಭಿಕನಾಗಿ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಅಜಿತ್ ಅಗರ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿದ್ದಂತೆ ಅದಕ್ಕೆ ರೋಹಿತ್ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಯಾರನ್ನೂ ಭೇಟಿ ಮಾಡಿಲ್ಲ, ಈಗ ಹರಿದಾಡುತ್ತಿರುವ ಮಾಹಿತಿಗಳೆಲ್ಲವೂ ಸುಳ್ಳು. ಅಜಿತ್ ಅಗರ್ಕರ್ ದುಬೈನಲ್ಲಿ ಗಾಲ್ಫ್ ಆಡ್ತಿದ್ದಾರೆ, ದ್ರಾವಿಡ್ (Rahul Dravid) ಬೆಂಗಳೂರಿನಲ್ಲಿ ತಮ್ಮ ಮಕ್ಕಳ ಆಟ ನೋಡುತ್ತಿದ್ದಾರೆ. ಅಜಿತ್, ದ್ರಾವಿಡ್ ಅಥವಾ ನನ್ನಿಂದ ಬಂದರೆ ಮಾತ್ರ ಅದು ಅಧಿಕೃತವಾಗಿರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೇ ಓವರ್‌ನಲ್ಲಿ 26 ರನ್ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್ ಕಳಪೆ ಬೌಲಿಂಗ್‌ಗೆ ಫುಲ್ ಕ್ಲಾಸ್
Advertisement
ಪಾಂಡ್ಯ ಆಯ್ಕೆ ಸ್ಪಷ್ಟತೆ ಇಲ್ಲ:
ಆಲ್‌ರೌಂಡರ್‌ಗಳ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ನಡುವೆ ಪೈಪೋಟಿ ನಡೆದಿದೆ. ಸಿಎಸ್‌ಕೆ ತಂಡದ ಪರ ಅಬ್ಬರಿಸುತ್ತಿರುವ ಶಿವಂ ದುಬೆ ಅವರನ್ನ ಆಯ್ಕೆ ಮಾಡುವ ವಿಷಯದಲ್ಲೂ ಬಿಸಿಸಿಐ ಸ್ಪಷ್ಟತೆ ಹೊಂದಿದೆ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ದುಬೆ ಬ್ಯಾಟಿಂಗ್‌ನಲ್ಲಿ ಗಮನ ಸೆಳೆದಿದ್ದಾರೆ. ಅಲ್ಲದೇ ಐಪಿಎಲ್‌ಗೂ ಮುನ್ನ ಅಫ್ಘಾಸ್ತಾನದ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಬ್ಯಾಕ್ ಟು ಬ್ಯಾಕ್ ಫಿಫ್ಟಿ ಸಿಡಿಸಿ ಗಮನ ಸೆಳೆದಿದ್ದರು. ಆದ್ರೆ ಕಳಪೆ ಬೌಲಿಂಗ್ ಫಾರ್ಮ್‌ನಲ್ಲಿರುವ ಹಾರ್ದಿಕ್ ಪಾಂಡ್ಯ ಅವರು 6 ಪಂದ್ಯಗಳಲ್ಲಿ ಒಂದೇ ಒಂದು ಫಿಫ್ಟಿಯನ್ನೂ ಬಾರಿಸಿಲ್ಲ. ಹಾಗಾಗಿ ಅವರ ಆಯ್ಕೆ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ ಎಂದು ಹೇಳಲಾಗಿದೆ.
ಶಾರ್ಟ್‌ಲಿಸ್ಟ್ ವಿಕೆಟ್ ಕೀಪರ್ಸ್:
ವಿಕೆಟ್ ಕೀಪರ್-ಬ್ಯಾಟ್ಸ್‌ಮನ್‌ಗಳ ಸ್ಥಾನಕ್ಕೆ ರಿಷಭ್ ಪಂತ್, ಕೆ.ಎಲ್ ರಾಹುಲ್ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ಬಿಸಿಸಿಐ ಶಾರ್ಟ್ ಲಿಸ್ಟ್ ಮಾಡಿದೆ. ಇದರಲ್ಲಿ ಒಬ್ಬರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಯ್ಕೆ ಮಾಡಬಹುದು. ಕಳೆದ ವರ್ಷ ಏಕದಿನ ಏಷ್ಯಾಕಪ್, ಏಕದಿನ ವಿಶ್ವಕಪ್ ಟೂರ್ನಿಗಳಿಂದ ವಂಚಿತರಾಗಿದ್ದ ಸಂಜು ಸ್ಯಾಮ್ಸನ್ ಈ ಬಾರಿಯಾದರೂ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: IPL 2024: ಮಕ್ಕಳ ಶಾಲಾ ಶುಲ್ಕಕ್ಕೆ ಕೂಡಿಟ್ಟ ಹಣದಲ್ಲೇ ಟಿಕೆಟ್ ಖರೀದಿಸಿದ ಧೋನಿ ಅಭಿಮಾನಿ!
20 ಸದಸ್ಯರ ಭಾರತ ಸಂಭಾವ್ಯ ತಂಡ:
ಬ್ಯಾಟರ್ಸ್: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಿವಂ ದುಬೆ, ಅಕ್ಷರ್ ಪಟೇಲ್
ಸ್ಪಿನ್ನರ್‌ಗಳು: ಕುಲ್ದೀಪ್ ಯಾದವ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯಿ
ವಿಕೆಟ್ ಕೀಪರ್-ಬ್ಯಾಟರ್ಸ್: ರಿಷಭ್ ಪಂತ್, ಕೆ.ಎಲ್ ರಾಹುಲ್, ಸಂಜು ಸ್ಯಾಮ್ಸನ್
ವೇಗಿಗಳು: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಅವೇಶ್ ಖಾನ್