ನ್ಯೂಯಾರ್ಕ್: ಪಾಕಿಸ್ತಾನ (Pakistan) ವಿರುದ್ಧ ಸೂಪರ್ ಸಂಡೇ (ಜೂ.8) ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ದೊಡ್ಡ ಆಘಾತವಾಗಿದೆ. ಐರ್ಲೆಂಡ್ ವಿರುದ್ಧ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಅವರು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದ ಮುಂದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯುತ್ತಾರಾ ಇಲ್ಲವೋ ಅನ್ನೋ ಪ್ರಶ್ನೆ ಮೂಡಿದೆ.
ಹೌದು.. ಪ್ರಸಕ್ತ ವರ್ಷ ಟಿ20 ವಿಶ್ವಕಪ್ (T20 World Cup) ಟೂರ್ನಿಯ ಭಾರತ-ಪಾಕಿಸ್ತಾನ (Ind vs Pak) ಪಂದ್ಯ ಭಾನುವಾರ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:00 ಗಂಟೆಗೆ ಪಂದ್ಯ ಆರಂಭಗೊಳ್ಳಲಿದೆ. ಇದನ್ನೂ ಓದಿ: T20 World Cup: ವಿಶ್ವಚಾಂಪಿಯನ್ ತಂಡದ ಮೇಲೆ ಹಣದ ಮಳೆ ಸುರಿಸಲಿದೆ ICC
2024ರ ಟಿ20 ವಿಶ್ಚಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಅಮೆರಿಕ ತಂಡದ ವಿರುದ್ಧ ವಿರೋಚಿತ ಸೋಲಿಗೆ ತುತ್ತಾಗಿರುವ ಪಾಕಿಸ್ತಾನ ಟೀಂ ಇಂಡಿಯಾ (Team India) ವಿರುದ್ಧ ಪುಟಿದೇಳುವ ತವಕದಲ್ಲಿದೆ. ಇನ್ನೂ ಐರ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ಪಾಕ್ ವಿರುದ್ಧ ಗೆದ್ದು ಸೂಪರ್-8 ಹಂತಕ್ಕೆ ಲಗ್ಗೆಯಿಡುವ ಉತ್ಸಾಹದಲ್ಲಿದೆ. ಈ ಹೊತ್ತಿನಲ್ಲೇ ರೋಹಿತ್ ಶರ್ಮಾ ಅವರ ಕೈಬೆರಳು ಗಾಯಕ್ಕೆ ತುತ್ತಾಗಿದ್ದು, ಅವರ ಮುಂದಿನ ನಡೆಯ ಬಗ್ಗೆ ತೀವ್ರ ಕುತೂಹಲ ಕೆರಳಿಸಿದೆ. ಅಲ್ಲದೇ ಸೂಪರ್-8 ಪ್ರವೇಶಿಸಲು ಈ ಗೆಲುವು ನಿರ್ಣಾಯಕವೂ ಆಗಿದ್ದು, ಪಾಕ್ ತಂಡಕ್ಕೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಐರ್ಲೆಂಡ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ 37 ಎಸೆತಗಳಲ್ಲಿ 52 ರನ್ ಬಾರಿಸಿದ್ದರು. ಈ ವೇಳೆ ವೇಗಿ ಜೋಶ್ ಲಿಟಲ್ ಅವರ ಎಸೆತವು ರೋಹಿತ್ ಕೈ ಬೆರಳಿಗೆ ಬಲವಾಗಿ ತಾಗಿ ಗಾಯಗೊಂಡಿದ್ದರು. ಇದರಿಂದ ಪಂದ್ಯದ ಮಧ್ಯದಲ್ಲಿಯೇ ಮೈದಾನ ತೊರೆದಿದ್ದರು. ಹಾಗಾಗಿ ಪಾಕಿಸ್ತಾನದ ವಿರುದ್ಧ ಅವರು ಕಣಕ್ಕಿಳಿಯುತ್ತಾರಾ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.
ರೋಹಿತ್ ಶರ್ಮಾ ಅವರು ಗಾಯಗೊಂಡಿರುವ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಒಂದು ವೇಳೆ ರೋಹಿತ್ ಪಾಕ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾದರೆ, ಉಪನಾಯಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ರೋಹಿತ್ ಶರ್ಮಾ ಅವರ ಸ್ಥಾನ ತುಂಬಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: T20 World Cup: ಸ್ಕಾಟ್‌ಲೆಂಡ್ ಬಳಿಕ ಐರ್ಲೆಂಡ್ ಜೆರ್ಸಿಯಲ್ಲಿ ಮಿಂಚಿದ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್!
ವಿಶ್ವಕಪ್‌ನಲ್ಲಿ ಸೋಲನ್ನೇ ನೋಡದ ಭಾರತ:
2007ರಿಂದ ಈವರೆಗೆ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕ್ ಎದುರು ಸೋಲನ್ನೇ ಕಂಡಿಲ್ಲ. ಏಷ್ಯಾಕಪ್ ಟೂರ್ನಿಯಲ್ಲಿ ಮಾತ್ರ ಸೋಲು ಕಂಡಿದೆ. 2007ರಿಂದ ಈವರೆಗೆ ನಡೆದ 12 ಟಿ20ಐ ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳಲ್ಲಿ ಮಾತ್ರ ಪಾಕಿಸ್ತಾನ ಗೆದ್ದಿದ್ದರೆ, ಟೀಂ ಇಂಡಿಯಾ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಟೈನಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ಆರಂಭಿಕ ಪಂದ್ಯದಲ್ಲೇ ಐತಿಹಾಸಿಕ ಗೆಲುವು – T20 ವಿಶ್ವಕಪ್‌ನಲ್ಲಿ USA ಶುಭಾರಂಭ!