ಮುಂಬೈ: ನ್ಯೂಜಿಲೆಂಡ್ ವಿರುದ್ಧ ಸೆಣಸಾಡಿ ಚಾಂಪಿಯನ್ಸ್ ಟ್ರೋಫಿ (Champions Trophy) ತಮ್ಮದಾಗಿಸಿಕೊಂಡ ಟೀಂ ಇಂಡಿಯಾ (Team India) ಆಟಗಾರರು ತವರು ಸೇರಿದ್ದಾರೆ. ಅದೇ ರೀತಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ (Rohit Sharma) ಅದ್ಧೂರಿ ಸ್ವಾಗತ ದೊರೆಯಿತು.
ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ರೋಹಿತ್ ಶರ್ಮಾ ಮುಂಬೈ ಏರ್‌ಪೋರ್ಟ್‌ಗೆ ಬಂದಿಳಿದರು. ನೀಲಿ ಜೀನ್ಸ್ ಪ್ಯಾಂಟ್, ಕಪ್ಪು ಬಣ್ಣದ ಟಿ -ಶರ್ಟ್ ತೊಟ್ಟ ರೋಹಿತ್ ಶರ್ಮಾ ತಲೆಯ ಮೇಲೆ ನೀಲಿ ಬಣ್ಣದ ಕ್ಯಾಪ್ ಧರಿಸಿದ್ದರು. ಏರ್‌ಪೋರ್ಟ್‌ನಿಂದ ಹೊರ ಬರುತ್ತಲೇ ಅಭಿಮಾನಿಗಳತ್ತ ಕೈ ಬೀಸಿದ ರೋಹಿತ್ ನಗು ಮುಖದಿಂದ ತಮ್ಮ ಕಾರು ಏರಿದರು. ಇವರನ್ನು ಕಂಡು ಅಭಿಮಾನಿಗಳು ಘೋಷಣೆಗಳನ್ನು ಕೂಗಿದರು. ಇದನ್ನೂ ಓದಿ: ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!
View this post on Instagram
ಮುಂಬೈ ಇಂಡಿಯನ್ಸ್ ತನ್ನ ಸಾಮಾಜಿಕ ತಾಣ ಎಕ್ಸ್‌ನಲ್ಲಿ ಈ ಕುರಿತ ಒಂದು ವೀಡಿಯೋ ಪೋಸ್ಟ್ ಮಾಡಿದೆ. ಈ ವೀಡಿಯೋದಲ್ಲಿ ರೋಹಿತ್ ಶರ್ಮಾ ವಿಮಾನ ನಿಲ್ದಾಣದಿಂದ ಹೊರ ಬರುತ್ತಲೆ ಅಭಿಮಾನಿಗಳು ಅವರ ಹೆಸರನ್ನು ಘೋಷಣೆ ಕೂಗಿ ಜೈಕಾರ ಹಾಕುವ ಮೂಲಕ ಭರ್ಜರಿ ಸ್ವಾಗತ ಕೋರಿದರು. ವಿಮಾನ ನಿಲ್ದಾಣದಿಂದ ಹೊರಬಂದ ನಂತರ, ರೋಹಿತ್ ಅಭಿಮಾನಿಗಳಿಗೆ ಕೈ ಬೀಸುತ್ತಾ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಕುಳಿತು ಮನೆಗೆ ಹೊರಟರು. ಇದನ್ನೂ ಓದಿ: ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಇನ್ನು ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಕೂಡ ಸೋಮವಾರ ರಾತ್ರಿ 7 ಗಂಟೆಯ ಸುಮಾರಿಗೆ ನವದೆಹಲಿಗೆ ಬಂದಿಳಿದರು. ಈ ವೇಳೆ ಅವರಿಗೂ ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಗೌತಮ್ ಗಂಭೀರ್ ತಮ್ಮ ಮನೆಕಡೆ ಹೊರಟರು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧ
ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ. ಇದನ್ನೂ ಓದಿ: Hassan| ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಗರಿಷ್ಠ ರನ್ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಶೇಷ ಸಾಧನೆಗೆ ಪಾತ್ರರಾದರು. ಇದನ್ನೂ ಓದಿ: ನಲ್ಲೂರು ಮಠ ವರ್ಸಸ್ ಬಡಾಮಕಾನ್ ತೆರವು ವಿವಾದ – ಜಿಲ್ಲಾ ವಕ್ಫ್ ಅಧಿಕಾರಿ ಅಮಾನತು