ನವದೆಹಲಿ: 2026 ರ ಪದ್ಮ ಪ್ರಶಸ್ತಿಗಳ (Padma Awards 2026) ಗೌರವ ಪಟ್ಟಿಯಲ್ಲಿ ಹೆಸರಿಸಲಾದ ಒಂಬತ್ತು ಮಾಜಿ ಮತ್ತು ಹಾಲಿ ಕ್ರೀಡಾಪಟುಗಳಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ಹರ್ಮನ್‌ಪ್ರೀತ್ ಕೌರ್ (Harmanpreet Kaur) ಸೇರಿದ್ದಾರೆ.
ಟೆನಿಸ್ ದಂತಕಥೆ ವಿಜಯ್ ಅಮೃತರಾಜ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗುತ್ತಿದ್ದು, ಭಾರತೀಯ ಮಹಿಳಾ ಹಾಕಿ ಗೋಲ್‌ಕೀಪರ್ ಸವಿತಾ ಪುನಿಯಾ, ಬಲದೇವ್ ಸಿಂಗ್, ಭಗವಾನ್‌ದಾಸ್ ರಾಯ್ಕ್ವಾರ್, ಕೆ ಪಜನಿವೆಲ್ ಮತ್ತು ಪ್ರವೀಣ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಾರ್ಜಿಯಾದ ಕುಸ್ತಿ ತರಬೇತುದಾರ ವ್ಲಾಡಿಮಿರ್ ಮೆಸ್ಟ್ವಿರಿಶ್ವಿಲಿ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಇದನ್ನೂ ಓದಿ: ಬಾಹ್ಯಾಕಾಶಕ್ಕೆ ತೆರಳಿದ್ದ ಸ್ಪೇಸ್ ಹೀರೋ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ
ಒಟ್ಟು 5 ಮಂದಿಗೆ ಪದ್ಮವಿಭೂಷಣ, 13 ಮಂದಿಗೆ ಪದ್ಮಭೂಷಣ, 113 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಕೇಂದ್ರ ಸರ್ಕಾರ ಘೋಷಿಸಿದೆ. ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

