ಮುಂಬೈ: 2025ರ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (IPL 2025) ನಡೆಯಲಿರುವ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡದ ರಿಟೇನ್ ಆಟಗಾರರ ಪಟ್ಟಿಯನ್ನು ಅ.31ರ ಒಳಗೆ ಪ್ರಕಟಿಸುವಂತೆ ಬಿಸಿಸಿಐ (BCCI) ಡೆಡ್‌ಲೈನ್ ಫಿಕ್ಸ್ ಮಾಡಿದೆ. ಈ ಹಿನ್ನೆಲೆಯಲ್ಲಿ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಸಂಭಾವ್ಯ ಪಟ್ಟಿಯನ್ನು ಸಿದ್ಧ ಮಾಡಿಕೊಂಡಿವೆ ಎಂದು ಹೇಳಲಾಗುತ್ತಿವೆ.
Advertisement
2025ರ ಐಪಿಎಲ್ ಆವೃತ್ತಿಯು ಅನೇಕ ದಿಗ್ಗಜ ಆಟಗಾರರ ಪಾಲಿಗೆ ಸವಾಲಿದ್ದಾಗಿದೆ. 6 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಅವಕಾಶ ಇರುವ ಕಾರಣ ಲೆಜೆಂಡ್ ಎಂ.ಎಸ್ ಧೋನಿ, ಸಿಎಸ್‌ಕೆ ತಂಡದಲ್ಲೇ ಉಳಿಯಲಿದ್ದಾರೆ ಎಂಬುದು ಕನ್ಫರ್ಮ್ ಎನ್ನಲಾಗಿದೆ. ಆದ್ರೆ ಆರ್‌ಸಿಬಿ ತಂಡದಲ್ಲಿ ಇನ್ನೂ ಮಹತ್ವದ ಬದಲಾವಣೆ ಕಂಡುಬಂದಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ 5 ಬಾರಿ ಚಾಂಪಿಯನ್ ಪಟ್ಟ ಗೆದ್ದುಕೊಟ್ಟಿರುವ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಆರ್‌ಸಿಬಿ ತಂಡಕ್ಕೆ ಎಂಟ್ರಿ ಕೊಡಲಿದ್ದು, ಹಾಲಿ ಕ್ಯಾಪ್ಟನ್ ಫಾಫ್ ಡು ಪ್ಲೆಸಿಸ್ ತಂಡದಿಂದ ಔಟ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
Advertisement
Advertisement
10 ಫ್ರಾಂಚೈಸಿಗಳ ಸಂಭಾವ್ಯ ಪಟ್ಟಿ ಹೀಗಿದೆ…
* ಚೆನ್ನೈ ಸೂಪರ್ ಕಿಂಗ್ಸ್:
ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶಿವಂ ದುಬೆ, ಡೇರಿಲ್ ಮಿಚೆಲ್, ಮತೀಶ ಪತಿರಣ, ಎಂ.ಎಸ್ ಧೋನಿ
Advertisement
* ಮುಂಬೈ ಇಂಡಿಯನ್ಸ್:
ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಅನ್ಶುಲ್ ಕಾಂಬೋಜ್
* ರಾಯಲ್ ಚಾಲೆಂಜರ್ಸ್ ಬೆಂಗಳೂರು:
ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಯಶ್ ದಯಾಳ್
* ರಾಜಸ್ಥಾನ್ ರಾಯಲ್ಸ್:
ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಸಂದೀಪ್ ಶರ್ಮಾ
* ಕೋಲ್ಕತ್ತಾ ನೈಟ್ ರೈಡರ್ಸ್:
ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಫಿಲ್ ಸಾಲ್ಟ್, ಸುನಿಲ್ ನರೈನ್, ಆಂಡ್ರೆ ರಸೆಲ್, ಹರ್ಷಿತ್ ರಾಣಾ
* ಗುಜರಾತ್ ಟೈಟಾನ್ಸ್:
ಶುಭಮನ್ ಗಿಲ್, ರಶೀದ್ ಖಾನ್, ಡೇವಿಡ್ ಮಿಲ್ಲರ್, ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ರಾಹುಲ್ ತೆವಾಟಿಯಾ
* ಲಕ್ನೋ ಸೂಪರ್ ಜೈಂಟ್ಸ್:
ಕೆ.ಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಾರ್ಕಸ್ ಸ್ಟೊಯಿನಿಸ್, ಮಯಾಂಕ್ ಯಾದವ್
* ಡೆಲ್ಲಿ ಕ್ಯಾಪಿಟಲ್ಸ್:
ರಿಷಬ್ ಪಂತ್, ಟ್ರಿಸ್ಟಾನ್ ಸ್ಟಬ್ಸ್, ಮಿಚೆಲ್ ಮಾರ್ಷ್, ಜೇಕ್ ಫ್ರೇಸರ್-ಮೆಕ್ ಗಾರ್ಕ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್
* ಪಂಜಾಬ್ ಕಿಂಗ್ಸ್:
ಸ್ಯಾಮ್ ಕುರ್ರಾನ್, ಅರ್ಷ್‌ದೀಪ್ ಸಿಂಗ್, ಕಗಿಸೊ ರಬಾಡ, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ
* ಸನ್‌ರೈಸರ್ಸ್ ಹೈದರಾಬಾದ್:
ಪ್ಯಾಟ್ ಕಮಿನ್ಸ್, ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಹೆನ್ರಿಚ್ ಕ್ಲಾಸೆನ್, ಟಿ. ನಟರಾಜನ್, ನಿತೀಶ್ ಕುಮಾರ್ ರೆಡ್ಡಿ.
ಟ್ರೇಡ್ ಇನ್ ವಿಂಡೋನಲ್ಲಿ ಬದಲಾವಣೆ ಸಾಧ್ಯತೆ:
ಸದ್ಯ ಮುಂಬೈ ಇಂಡಿಯನ್ಸ್‌ನ ರೋಹಿತ್ ಶರ್ಮಾ ಅವರು ರಿಟೇನ್ ಆಟಗಾರರ ಪಟ್ಟಿಯಲ್ಲಿದ್ದರೂ, ಅವರು ಟ್ರೇಡ್ ಇನ್ ವಿಂಡೋ ನಿಯಮದಲ್ಲಿ ಆರ್‌ಸಿಬಿ ಪಾಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹಾಲಿ ಕ್ಯಾಪ್ಟನ್ ಫಾಫ್ ಡು ಪ್ಲೆಸಿಸ್ ರಿಟೇನ್ ಸಂಭಾವ್ಯ ಪಟ್ಟಿಯಲ್ಲಿ ಇಲ್ಲದಿರುವುದೂ ಇದಕ್ಕೆ ಕಾರಣವಾಗಿದೆ. 2024ರ ಆವೃತ್ತಿಯಲ್ಲಿ ಆಸೀಸ್ ಆಟಗಾರ ಕ್ಯಾಮರೂನ್ ಗ್ರೀನ್ ಮುಂಬೈ ಇಂಡಿಯನ್ಸ್ ಮತ್ತು ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದರೂ ಅವರನ್ನು ಟ್ರೆಡ್ ಇನ್ ವಿಂಡೋ ನಿಯಮದ ಪ್ರಕಾರ ಬದಲಾವಣೆ ಮಾಡಿಕೊಳ್ಳಲಾಗಿತ್ತು. ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್‌ಗೆ ಕರೆತಂದು, ಗ್ರೀನ್ ಅವರನ್ನ ಆರ್‌ಸಿಬಿ ತಂಡಕ್ಕೆ ಬಿಟ್ಟುಕೊಡಲಾಗಿತ್ತು.